ಭಾರತದ ಗಗನಯಾತ್ರಿ ಶುಭಾಂಶು ಶುಕ್ಲ ಮರಳಿ ಭಾರತಕ್ಕೆ- ಪ್ರಧಾನಿ ಮೋದಿ ಅವರನ್ನು ಭೇಟಿಯಾಗುವ ಸಾಧ್ಯತೆ

ಭಾರತದ ಗಗನಯಾತ್ರಿ ಶುಭಾಂಶು ಶುಕ್ಲ ಮರಳಿ ಭಾರತಕ್ಕೆ- ಪ್ರಧಾನಿ ಮೋದಿ ಅವರನ್ನು ಭೇಟಿಯಾಗುವ ಸಾಧ್ಯತೆ

ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ಗೆ ಐತಿಹಾಸಿಕ ಭೇಟಿ ನೀಡಿ, ಗಗನಯಾತ್ರಿ ಶುಭಾಂಶು ಶುಕ್ಲ ಭಾನುವಾರ (ಆಗಸ್ಟ್ 17, 2025) ಬೆಳಗಿನ ಜಾವ ಭಾರತಕ್ಕೆ ಮರಳಿದರು. ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರಿಗೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತ ಮತ್ತು ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ಅವರು ಸ್ವಾಗತ ಕೋರಿದರು.

ಅವರೊಂದಿಗೆ ಬ್ಯಾಕಪ್ ಗಗನಯಾತ್ರಿಯಾಗಿದ್ದ ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ನಾಯರ್ ಕೂಡ ಮರಳಿದ್ದಾರೆ.ಮುಂಬರುವ ದಿನಗಳಲ್ಲಿ ಶುಭಾಂಶು ಶುಕ್ಲ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಜೊತೆಗೆ, ಆಗಸ್ಟ್ 22–23ರಂದು ನಡೆಯಲಿರುವ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಕಾರ್ಯಕ್ರಮದಲ್ಲೂ ಅವರು ಭಾಗವಹಿಸಲಿದ್ದಾರೆ.

Axiom-4 ಮಿಷನ್ ಅಡಿಯಲ್ಲಿ ಶುಭಾಂಶು ಶುಕ್ಲ ಅವರು 18 ದಿನಗಳ ಕಾಲ ಬಾಹ್ಯಾಕಾಶ ನಿಲ್ದಾಣದಲ್ಲಿ 60ಕ್ಕೂ ಹೆಚ್ಚು ವೈಜ್ಞಾನಿಕ ಪ್ರಯೋಗಗಳು ಮತ್ತು 20ಕ್ಕೂ ಹೆಚ್ಚು ಜನಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದ್ದರು. ವಿಶೇಷವಾಗಿ, ಬಾಹ್ಯಾಕಾಶದಲ್ಲಿ ಸ್ನಾಯು ಕ್ಷಯ (skeletal muscle degradation) ಕುರಿತು ಅವರು ಮಹತ್ವದ ಸಂಶೋಧನೆ ಕೈಗೊಂಡಿದ್ದರು.

ಭಾರತದ ಮೊದಲ ಮಾನವ ಬಾಹ್ಯಾಕಾಶ ಯಾನ ಗಗನ್ಯಾನ್ಗೆ ಅವರ ಅನುಭವ ಅತ್ಯಂತ ಉಪಯುಕ್ತವಾಗಲಿದೆ ಎಂದು ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ಹೇಳಿದರು.ಜುಲೈ 15ರಂದು ಭೂಮಿಗೆ ಮರಳಿದ ಶುಭಾಂಶು ಶುಕ್ಲ ಅವರು ISS ತಲುಪಿದ 634ನೇ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಅಂತರಾಷ್ಟ್ರೀಯ ರಾಷ್ಟ್ರೀಯ