ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ, ಮಹೇಶ್ ಶೆಟ್ಟಿ ತಿಮರೊಡಿ ಅವರನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಿಗ್ಗೆ ಬೆಳ್ತಂಗಡಿಯ ತಿಮರೊಡಿ ಮನೆಯಿಂದ ಬ್ರಹ್ಮಾವರ ಪೊಲೀಸ್ ಠಾಣೆಯ ಬ್ರಹತ್ ತಂಡ ಅವರನ್ನು ವಶಕ್ಕೆ ಪಡೆದುಕೊಂಡಿದೆ.

ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಮೊದಲು ಪ್ರಕರಣ ದಾಖಲಾಗಿತ್ತು. ಅದನ್ನು ಮುಂದುವರೆಸಿ ಪೊಲೀಸರು ಮಹೇಶ್ ಶೆಟ್ಟಿ ಅವರನ್ನು ವಶಪಡಿಸಿಕೊಂಡಿದ್ದಾರೆ.
ಬಂಧನದ ವೇಳೆ ಗಿರೀಶ್ ಮಟ್ಟಣ್ಣನವರ್ ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರಿಂದ ಮಹೇಶ್ ಶೆಟ್ಟಿ ತಿಮರೋಡಿ ಪರ ಘೋಷಣೆಗಳು ಕೂಡ ಕೇಳಿ ಬಂದಿದ್ದು ಮುಂದಿನ ಬೆಳವಣಿಗೆ ಬಗ್ಗೆ ಕುತೂಹಲ ಮೂಡಿಸಿದೆ.

