ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣದಲ್ಲಿ ದೊಡ್ಡ ಬೆಳವಣಿಗೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ನೀಡಿದ್ದ ‘ಮಾಸ್ಕ್ ಮ್ಯಾನ್’ ಅನ್ನು ಇಂದು ವಿಶೇಷ ತನಿಖಾ ತಂಡ (SIT) ಬಂಧಿಸಿದೆ.

ಪ್ರಕರಣದಲ್ಲಿ ಸುಳ್ಳು ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಎಂಬ ಶಂಕೆಯ ಹಿನ್ನೆಲೆಯಲ್ಲಿ SIT ಕ್ರಮ ಕೈಗೊಂಡಿದೆ. ಮೊದಲು ಮಾಸ್ಕ್ ಮ್ಯಾನ್ ನೀಡಿದ್ದ ಹೇಳಿಕೆ ಪ್ರಕರಣದಲ್ಲಿ ಪ್ರಮುಖ ತಿರುವು ತಂದುಕೊಟ್ಟಿದ್ದರೂ, ಈಗ ತನಿಖೆಯ ಸಮಯದಲ್ಲಿ ಅವರ ಪಾತ್ರದ ಬಗ್ಗೆ ಗಂಭೀರ ಅನುಮಾನಗಳು ವ್ಯಕ್ತವಾಗಿವೆ.
ಬಂಧನದ ಬಳಿಕ SIT ಮಾಸ್ಕ್ ಮ್ಯಾನ್‌ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. 11 ಗಂಟೆಗೆ ಕೋರ್ಟ್ ಗೆ ಹಾಜರು ಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯುವ ಸಾದ್ಯತೆ ಇದೆ ಮುಂದಿನ ದಿನಗಳಲ್ಲಿ ಹೆಚ್ಚಿನ ಸತ್ಯಗಳು ಬಹಿರಂಗವಾಗುವ ಸಾಧ್ಯತೆ ಇದೆ.

