ಮಂಗಳೂರು, ಆ.28:
ಭಾರತೀಯ ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಿದೆ.

ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 29, ಶುಕ್ರವಾರದಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಸರ್ಕಾರಿ-ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಸಾರ್ವಜನಿಕರಿಗೆ ನೀಡಿರುವ ಸೂಚನೆಗಳು:
- ಮಕ್ಕಳು ತಗ್ಗು ಪ್ರದೇಶ, ನದಿ-ಕೆರೆ-ಸಮುದ್ರ ತೀರಗಳಿಗೆ ಹೋಗದಂತೆ ಪೋಷಕರು ಜಾಗ್ರತೆ ವಹಿಸಬೇಕು.
- ಮೀನುಗಾರರು ಸಮುದ್ರಕ್ಕೆ ಇಳಿಯಬಾರದು.
- ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ ಮತ್ತು ಸಮುದ್ರ ತೀರಗಳಿಗೆ ತೆರಳದಂತೆ ಸೂಚಿಸಲಾಗಿದೆ.
- ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ಕೇಂದ್ರಗಳಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಕಾರ್ಯ ನಿರ್ವಹಿಸಬೇಕು.
- ತಾಲೂಕು ಮಟ್ಟದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲು ಸೂಚನೆ ನೀಡಲಾಗಿದೆ.
📞 ತುರ್ತು ಪರಿಸ್ಥಿತಿಗೆ ಟೋಲ್ ಫ್ರೀ ಸಹಾಯವಾಣಿ: 1077 / 0824-2442590
👉 ಜಿಲ್ಲೆಯ ಜನತೆಗೆ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

 
                                