ಮುಂಬೈ: ರಿಲಯನ್ಸ್ ಫೌಂಡೇಶನ್ ವತಿಯಿಂದ ಮುಂಬೈ ನಗರದ ಹೃದಯಭಾಗದಲ್ಲಿ 2,000 ಹಾಸಿಗೆಗಳ ಸಾಮರ್ಥ್ಯ ಹೊಂದಿದ ಮೆಡಿಕಲ್ ಸಿಟಿ ಸ್ಥಾಪನೆಗೊಳ್ಳಲಿದೆ ಎಂದು ಸಂಸ್ಥೆಯ ಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ ಘೋಷಿಸಿದ್ದಾರೆ.

ಈ ಮೆಡಿಕಲ್ ಸಿಟಿ ಅತ್ಯಾಧುನಿಕ ಆರೋಗ್ಯ ತಂತ್ರಜ್ಞಾನವನ್ನು ಒಳಗೊಂಡಿದ್ದು, ಕೃತಕ ಬುದ್ಧಿಮತ್ತೆ (AI) ಆಧಾರಿತ ವೈದ್ಯಕೀಯ ಪರೀಕ್ಷೆಗಳು ಹಾಗೂ ಭವಿಷ್ಯಮುಖಿ ಆರೋಗ್ಯ ಸೇವೆಗಳನ್ನು ಒದಗಿಸಲು ವಿನ್ಯಾಸಗೊಳಿಸಲಾಗಿದೆ.
ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳನ್ನು ಹೊಂದಿರುವ ಈ ಆಸ್ಪತ್ರೆ, ಕೇವಲ ವೈದ್ಯಕೀಯ ಸೇವೆಗಳನ್ನು ನೀಡುವುದರ ಜೊತೆಗೆ, ಆರೋಗ್ಯ ಸೇವೆಯ ಪ್ರವೇಶವನ್ನು ಸುಲಭಗೊಳಿಸುವುದರ ಜೊತೆಗೆ, ಲಕ್ಷಾಂತರ ಜನರಿಗೆ ಹೊಸ ರೀತಿಯ ಆರೋಗ್ಯ ಆವಿಷ್ಕಾರಗಳನ್ನು ಪರಿಚಯಿಸುವುದೇ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.

