ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಪ್ರತ್ಯಕ್ಷ ಸಾಕ್ಷಿಯಾಗಿ SIT ಗೆ ದೂರು ನೀಡಿದ ಮಹಿಳೆ

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಪ್ರತ್ಯಕ್ಷ ಸಾಕ್ಷಿಯಾಗಿ SIT ಗೆ ದೂರು ನೀಡಿದ ಮಹಿಳೆ

ಮಂಡ್ಯ, ಆಗಸ್ಟ್ 31:
ಧರ್ಮಸ್ಥಳದ ಸೌಜನ್ಯ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಕೆಂಪಮ್ಮ ಎಂಬ ಮಹಿಳೆ ಪ್ರತ್ಯಕ್ಷ ಸಾಕ್ಷಿಯಾಗಿ ಮುಂದೆ ಬಂದು, ವಿಶೇಷ ತನಿಖಾ ದಳ (SIT) ಗೆ ದೂರು ನೀಡಿದ್ದಾರೆ.

ಅವರು ಹುಡುಗಿಯೊಬ್ಬಳನ್ನು ಕಾರಿನಲ್ಲಿ ಅಪಹರಿಸುವುದನ್ನು ಕಣ್ಣಾರೆ ಕಂಡಿದ್ದಾಗಿ ಹೇಳಿಕೆ ನೀಡಿದ್ದಾರೆ. ಚಿಕ್ಕಕೆಂಪಮ್ಮ ಅವರು ರೆಜಿಸ್ಟರ್ಡ್ ಪೋಸ್ಟ್ ಮುಖಾಂತರ ಹಾಗೂ ನೇರವಾಗಿ ಮೌಖಿಕವಾಗಿ SIT ಗೆ ದೂರು ದಾಖಲಿಸಿದ್ದು, ದೂರವಾಣಿ ಮೂಲಕವೂ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

ಈ ಹೊಸ ಸಾಕ್ಷ್ಯ ಸೌಜನ್ಯ ಪ್ರಕರಣಕ್ಕೆ ಮಹತ್ವದ ತಿರುವು ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಅಪರಾಧ ರಾಜ್ಯ