ಕನ್ನಡದ ಜನಪ್ರಿಯ ಹಾಸ್ಯನಟ ಚಿಕ್ಕಣ್ಣ ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಯುವತಿ ಪಾವನಾ ಅವರನ್ನು ಅವರು ವಿವಾಹವಾಗಲಿದ್ದಾರೆ.

ಪಾವನಾ ಉದ್ಯಮಿಯಾಗಿದ್ದು, ತಮ್ಮ ಬಯೋದಲ್ಲಿ ಮೆಕಾನಿಕಲ್ ಇಂಜಿನಿಯರ್ ಎಂದು ಉಲ್ಲೇಖಿಸಿದ್ದಾರೆ. ಇತ್ತೀಚೆಗೆ ಚಿಕ್ಕಣ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಈ ಜೋಡಿ ಒಟ್ಟಾಗಿ ಕಾಣಿಸಿಕೊಂಡಿದ್ದರಿಂದ ಅಭಿಮಾನಿಗಳ ಕುತೂಹಲ ಹೆಚ್ಚಿತ್ತು.
ಚಿಕ್ಕಣ್ಣ ಅವರು ಗಾರೆ ಕೆಲಸದಿಂದ ಸಿನಿರಂಗ ಪ್ರವೇಶಿಸಿ, ʻಅಧ್ಯಕ್ಷʼ ಹಾಗೂ ʻಉಪಾಧ್ಯಕ್ಷʼ ಸಿನಿಮಾಗಳ ಮೂಲಕ ಖ್ಯಾತಿ ಗಳಿಸಿದ್ದರು. ಶರಣ್, ಶಿವರಾಜ್‌ಕುಮಾರ್, ಯಶ್, ದರ್ಶನ್, ಸುದೀಪ್‌ರಂತಹ ಸ್ಟಾರ್‌ಗಳ ಜೊತೆ ನಟಿಸಿರುವ ಅವರು ಇದೀಗ ತಮ್ಮ ವೈಯಕ್ತಿಕ ಜೀವನದಲ್ಲಿ ಹೊಸ ಅಧ್ಯಾಯ ಆರಂಭಿಸಲು ಸಜ್ಜಾಗಿದ್ದಾರೆ.
ಮದುವೆಯ ದಿನಾಂಕದ ಬಗ್ಗೆ ಶೀಘ್ರದಲ್ಲೇ ಅಧಿಕೃತ ಮಾಹಿತಿ ಹೊರಬರುವ ನಿರೀಕ್ಷೆಯಿದೆ.


