ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ಮೇಲಿನ ಅವಹೇಳನ ಖಂಡಿಸಿ ಪುತ್ತೂರಿನಲ್ಲಿ ಜನಾಗ್ರಹ ಸಭೆ-ಶಾಸಕ ಅಶೋಕ್ ಕುಮಾರ್ ರೈ ಭಾಗಿ

ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ಮೇಲಿನ ಅವಹೇಳನ ಖಂಡಿಸಿ ಪುತ್ತೂರಿನಲ್ಲಿ ಜನಾಗ್ರಹ ಸಭೆ-ಶಾಸಕ ಅಶೋಕ್ ಕುಮಾರ್ ರೈ ಭಾಗಿ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ಮೇಲಿನ ಅವಹೇಳನವನ್ನು ಖಂಡಿಸಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಜನಾಗ್ರಹ ಸಭೆ ನಡೆಯಿತು.

ಈ ಸಭೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಸಭೆಯಲ್ಲಿ ಮಾತನಾಡಿದ ಅವರು, “ಶ್ರೀ ಕ್ಷೇತ್ರ ಧರ್ಮಸ್ಥಳ ಕರ್ನಾಟಕದ ಆಧ್ಯಾತ್ಮಿಕ, ಧಾರ್ಮಿಕ ಕೇಂದ್ರವಾಗಿದ್ದು, ಧರ್ಮಾಧಿಕಾರಿಗಳ ವಿರುದ್ಧ ನಡೆಯುತ್ತಿರುವ ಅವಹೇಳನೀಯ ಹೇಳಿಕೆಗಳು ತೀವ್ರವಾಗಿ ಖಂಡನೀಯ. ಜನರ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಇಂತಹ ಪ್ರವೃತ್ತಿ ತಕ್ಷಣ ನಿಲ್ಲಬೇಕು” ಎಂದು ಹೇಳಿದರು

ಧಾರ್ಮಿಕ ರಾಜ್ಯ ರಾಷ್ಟ್ರೀಯ