ಧರ್ಮಸ್ಥಳ ಹಾಗೂ ಡಾ. ವೀರೇಂದ್ರ ಹೆಗ್ಗಡೆಯವರ ಕುರಿತು ನಿರಂತರ ನಿಂದನೆ ಮಾಡುತ್ತಾ, ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದಕ್ಕಾಗಿ ಯೂಟ್ಯೂಬರ್ ಅಹೋರಾತ್ರ ಅಲಿಯಾಸ್ ನಿತೀಶ್ ಕೃಷ್ಣ ಪ್ರಸಾದ್‌ಗೆ ಸಿಟಿ ಸಿವಿಲ್ ನ್ಯಾಯಾಲಯ 15 ದಿನಗಳ ನ್ಯಾಯಾಂಗ ಬಂಧನ ಶಿಕ್ಷೆ ವಿಧಿಸಿದೆ.

ನ್ಯಾಯಾಲಯದ ಆದೇಶವನ್ನು ನಿರ್ಲಕ್ಷಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅವಮಾನಕಾರಿ ವಿಡಿಯೋಗಳನ್ನು ಹಂಚಿಕೊಂಡ ಹಿನ್ನೆಲೆಯಲ್ಲಿ ನಡೆದ ಸಂಪೂರ್ಣ ತನಿಖೆಯ ಬಳಿಕ ಈ ತೀರ್ಪು ನೀಡಲಾಗಿದೆ. ನ್ಯಾಯಾಂಗ ನಿಂದನೆ ಹಾಗೂ ಆದೇಶ ಉಲ್ಲಂಘನೆ ಸಾಬೀತಾದ ಕಾರಣ, ಕಾನೂನು ಪ್ರಕ್ರಿಯೆಯ ಪ್ರಕಾರ ಬಂಧನಕ್ಕೆ ಆದೇಶ ಹೊರಡಿಸಲಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಹಿರಿಯ ವಕೀಲ ರಾಜಶೇಖರ್ ಹಿಲ್ಯಾರು ವಾದ ನಡೆಸಿದರು.


