ಧರ್ಮಸ್ಥಳ ಚಲೋ – ಬಿಜೆಪಿ ಬೃಹತ್ ಸಮಾವೇಶ, ಹರಿದು ಬಂದ ಜನಸಾಗರ

ಧರ್ಮಸ್ಥಳ ಚಲೋ – ಬಿಜೆಪಿ ಬೃಹತ್ ಸಮಾವೇಶ, ಹರಿದು ಬಂದ ಜನಸಾಗರ

ಮಂಗಳೂರು, ಸೆಪ್ಟೆಂಬರ್ 1: ಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ, ಕರ್ನಾಟಕ ಬಿಜೆಪಿ ಇಂದು “ಧರ್ಮಸ್ಥಳ ಚಲೋ” ಕಾರ್ಯಕ್ರಮವನ್ನು ಆಯೋಜಿಸಿತು. ಮಧ್ಯಾಹ್ನ 2 ಗಂಟೆಗೆ ದೇವಸ್ಥಾನದ ಹೊರವಲಯದಲ್ಲಿರುವ ಮೈದಾನದಲ್ಲಿ ಬೃಹತ್ ಸಮಾವೇಶ ಜರುಗಿತು.

ಈ ಸಮಾವೇಶದಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ಕೇಂದ್ರ ಸಚಿವರುಗಳಾದ ಪ್ರಲ್ಹಾದ್ ಜೋಶಿ, ಶೋಭಾ ಕರಂದ್ಲಾಜೆ, ಪ್ರತಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಅನೇಕ ಸಂಸದರು, ಮಾಜಿ ಸಚಿವರು, ಶಾಸಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಸಮಾವೇಶಕ್ಕೆ ಸಾವಿರಾರು ಬಿಜೆಪಿ ಕಾರ್ಯಕರ್ತರು ಆಗಮಿಸಿದ್ದರು. ಇದಕ್ಕಾಗಿ 2 ಸಾವಿರ ಬಸ್‌ಗಳು ಮತ್ತು 10 ಸಾವಿರಕ್ಕೂ ಹೆಚ್ಚು ಕಾರುಗಳು ಬಳಕೆಯಾದವು. ಸಮಾವೇಶದ ಮುನ್ನ ಆರ್. ಅಶೋಕ್ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಬಿಜೆಪಿ ನಾಯಕರು ಈ ಸಂದರ್ಭದಲ್ಲಿ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರವನ್ನು ಖಂಡಿಸಿ, ಪ್ರಕರಣವನ್ನು ಎನ್‌ಐಎ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.

ಧಾರ್ಮಿಕ ರಾಜ್ಯ ರಾಷ್ಟ್ರೀಯ