ಸೌಜನ್ಯ ಪ್ರಕರಣ: ಮರುತನಿಖೆಗೆ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದರೆ ಖರ್ಚು ಬಿಜೆಪಿ ಭರಿಕೆ -ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಸೌಜನ್ಯ ಪ್ರಕರಣ: ಮರುತನಿಖೆಗೆ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದರೆ ಖರ್ಚು ಬಿಜೆಪಿ ಭರಿಕೆ -ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೆ ಈಡಾಗಿ ಕೊಲೆಯಾದ ಸೌಜನ್ಯಳ ಕುಟುಂಬಕ್ಕೆ ನ್ಯಾಯ ಸಿಗಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಭರವಸೆ ನೀಡಿದ್ದಾರೆ.

ಸೋಮವಾರ ಧರ್ಮಸ್ಥಳದಲ್ಲಿ ನಡೆದ ಸಮಾವೇಶದ ಬಳಿಕ ವಿಜಯೇಂದ್ರ ಅವರು ನೇರವಾಗಿ ಪಾಂಗಳದ ಸೌಜನ್ಯ ಮನೆಗೆ ಭೇಟಿ ನೀಡಿ ತಾಯಿ ಕುಸುಮಾವತಿ ಅವರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸೌಜನ್ಯ ಪ್ರಕರಣವನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ಮರುತನಿಖೆಗಾಗಿ ಮೇಲ್ಮನವಿ ಸಲ್ಲಿಸಿದರೆ ಅದರ ಸಂಪೂರ್ಣ ಖರ್ಚು ವೆಚ್ಚವನ್ನು ಬಿಜೆಪಿ ಭರಿಸುವುದಾಗಿ ಘೋಷಿಸಿದರು.

ಕುಸುಮಾವತಿ ಅವರು ತಮ್ಮ ವಿರುದ್ಧ ನಡೆಯುತ್ತಿರುವ ಅಪಪ್ರಚಾರಗಳ ಬಗ್ಗೆ ವಿಜಯೇಂದ್ರ ಅವರ ಗಮನ ಸೆಳೆದರು. ಈ ವೇಳೆ ಕುಟುಂಬಸ್ಥರೊಂದಿಗೆ ಮಾಧ್ಯಮದವರ ಅನುಪಸ್ಥಿತಿಯಲ್ಲಿ ವಿಜಯೇಂದ್ರ ಅವರು ಸಮಾಲೋಚನೆ ನಡೆಸಿದರು.

“ಸೌಜನ್ಯಳ ಸಾವಿಗೆ ನ್ಯಾಯ ಸಿಗಬೇಕು. ಮನೆಯವರು ಏನೆಲ್ಲ ತೀರ್ಮಾನ ಮಾಡಿದರೂ ನಾವು ಅವರ ಜೊತೆಗೆ ನಿಂತುಕೊಳ್ಳುತ್ತೇವೆ” ಎಂದು ವಿಜಯೇಂದ್ರ ಹೇಳಿದರು.

ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಇತರ ಮುಖಂಡರು ಹಾಜರಿದ್ದರು.

ಅಪರಾಧ ರಾಜ್ಯ ರಾಷ್ಟ್ರೀಯ