ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆ ಮುಂದುವರಿಯುತ್ತಿದ್ದು, ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬಿಸಿಲೆ ಘಾಟ್ನಲ್ಲಿ ಭೂಕುಸಿತ ಸಂಭವಿಸಿದೆ.

ರಾಜ್ಯ ಹೆದ್ದಾರಿ 85ರ ಅಡ್ಡಹೊಳೆ ಸಮೀಪ ರಸ್ತೆಗೆ ಭಾರೀ ಪ್ರಮಾಣದ ಮಣ್ಣು ಕುಸಿದಿದೆ. ಗುಡ್ಡ ಕುಸಿತದಿಂದಾಗಿ ರಸ್ತೆ ಸಂಪೂರ್ಣ ಮುಚ್ಚಲ್ಪಟ್ಟಿದ್ದು, ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.

