ಭಾರತ ರಾಜಧಾನಿ ನವದೆಹಲಿ 2026ರಲ್ಲಿ ಪ್ರತಿಷ್ಠಿತ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ಗೆ ಆತಿಥ್ಯ ವಹಿಸಲು ಸಜ್ಜಾಗಿದೆ. ವಿಶ್ವದ ಶ್ರೇಷ್ಠ ಶಟ್ಲರ್‌ಗಳನ್ನು ಒಂದೇ ವೇದಿಕೆಗೆ ಕರೆತರುವ ಈ ಮಹಾಸ್ಪರ್ಧೆ ಭಾರತದ ಕ್ರೀಡಾ ಪ್ರಭಾವವನ್ನು ಜಾಗತಿಕ ಮಟ್ಟದಲ್ಲಿ ಹೆಚ್ಚಿಸುವ ಮಹತ್ವದ ಹಂತವೆಂದು ಪರಿಗಣಿಸಲಾಗಿದೆ.

ಈ ನಿರ್ಧಾರವನ್ನು ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ (BWF) ಅಧಿಕೃತವಾಗಿ ಪ್ರಕಟಿಸಿದ್ದು, ಭಾರತ ಕ್ರೀಡಾ ಕ್ಷೇತ್ರದಲ್ಲಿ ಸಾಧಿಸಿರುವ ಪ್ರಗತಿ ಹಾಗೂ ಅಭಿಮಾನಿಗಳ ಉತ್ಸಾಹಕ್ಕೆ ಇದು ಪ್ರತೀಕವಾಗಿದೆ.
2026ರ ವಿಶ್ವ ಚಾಂಪಿಯನ್‌ಶಿಪ್ ಮೂಲಕ ಭಾರತವು ಅಂತಾರಾಷ್ಟ್ರೀಯ ಕ್ರೀಡಾ ವೇದಿಕೆಯಲ್ಲಿ ತನ್ನ ಸ್ಥಾನವನ್ನು ಇನ್ನಷ್ಟು ಬಲಪಡಿಸಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

