ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ

ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ

ಬುಧವಾರ (ಸೆಪ್ಟೆಂಬರ್ 3) ಬೆಳಗ್ಗೆ ಮಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಸಮೀಪದ ಕಲ್ಲುಗುಂಡಿ – ಕಡೆಪಾಲ ಬಳಿ ಕಾರು ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಶೋಭಾ ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಸುಳ್ಯದಲ್ಲಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಟ್ಯಾಂಕರ್ ಮಡಿಕೇರಿ ದಿಕ್ಕಿನಿಂದ ಸುಳ್ಯ ಕಡೆಗೆ ಬರುತ್ತಿದ್ದರೆ, ಕಾರು ವಿರುದ್ದ ದಿಕ್ಕಿನಿಂದ ಮಡಿಕೇರಿ ಕಡೆಗೆ ಹೋಗುತ್ತಿತ್ತು. ಈ ವೇಳೆ ಕಾರು ಹಾಗೂ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಿಂದ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ನಿಖರ ಕಾರಣ ತಿಳಿಯಲು ತನಿಖೆ ಆರಂಭಿಸಿದ್ದಾರೆ.

ಅಪರಾಧ ರಾಜ್ಯ