ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಯೋಜಿಸಲಾಗಿರುವ ಧರ್ಮಜಾಗೃತಿಯಾತ್ರೆಯ ಕುರಿತು ಚರ್ಚಿಸಲು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಸಹಕಾರಿ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿದೆ. ಸಭೆ ಸೆಪ್ಟೆಂಬರ್ 8, 2025 ಸೋಮವಾರ ಮಧ್ಯಾಹ್ನ 2:30ಕ್ಕೆ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ.


ಈ ಸಭೆಯ ಅಧ್ಯಕ್ಷತೆಯನ್ನು ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರು ವಹಿಸಲಿದ್ದು, ಉಭಯ ಜಿಲ್ಲೆಗಳ ಸಹಕಾರಿ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್ ಅಧ್ಯಕ್ಷ ಶಶಿಕುಮಾರ್ ರೈ ಪಾಲ್ಗೊಟ್ಟು ತಿಳಿಸಿದ್ದಾರೆ.

