ಬೆಳಗಾವಿ: ಏಷ್ಯಾದ ಪ್ರಮುಖ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ಹಾಗೂ ಕರ್ನಾಟಕ ರಾಜ್ಯದ ಏಕೈಕ ತಾಂತ್ರಿಕ ವಿಶ್ವವಿದ್ಯಾಲಯವಾದ ವಿಸ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿ.ಟಿ.ಯು) ಕುಲಪತಿಯಾಗಿ ಮಾನ್ಯ ಡಾ. ವಿದ್ಯಾಶಂಕರ್ ಅವರನ್ನು ದ್ವಿತೀಯ ಅವಧಿಗೆ ನೇಮಕ ಮಾಡಲಾಗಿದೆ.

ಡಾ. ವಿದ್ಯಾಶಂಕರ್ ಅವರು 2022ರ ಸೆಪ್ಟೆಂಬರ್‌ನಲ್ಲಿ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ್ದರು. 1991ರಲ್ಲಿ ಬೆಂಗಳೂರಿನ ಪ್ರಮುಖ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಒಂದಾದ ಬೆಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಉಪನ್ಯಾಸಕರಾಗಿ ತಮ್ಮ ಬೋಧನಾ ವೃತ್ತಿ ಪ್ರಾರಂಭಿಸಿದ ಅವರು, ಹಿರಿಯ ಉಪನ್ಯಾಸಕ, ಸಹಾಯಕ ಪ್ರಾಧ್ಯಾಪಕ, ಪ್ರಾಧ್ಯಾಪಕ, ಡೀನ್ ಹಾಗೂ ಪಿಜಿ ಸಂಯೋಜಕರಾಗಿ ಸೇವೆ ಸಲ್ಲಿಸಿದ್ದಾರೆ.
28 ವರ್ಷಗಳ ಬೋಧನಾ ಅನುಭವ, 15 ವರ್ಷಗಳ ಸಂಶೋಧನಾ ಅನುಭವ ಹೊಂದಿರುವ ಡಾ. ವಿದ್ಯಾಶಂಕರ್ ಅವರ ಮಾರ್ಗದರ್ಶನದಲ್ಲಿ ಆರು ಮಂದಿ ಪಿಎಚ್.ಡಿ ಪದವಿ ಪಡೆದಿದ್ದಾರೆ. ಹಲವು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪೇಟೆಂಟ್‌ಗಳನ್ನು ತಮ್ಮ ಹೆಸರಿನಲ್ಲಿ ದಾಖಲಿಸಿಕೊಂಡಿದ್ದಾರೆ.

