ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ಪಿತೃವಿಯೋಗ

ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ಪಿತೃವಿಯೋಗ

ಯುವ ಬ್ರಿಗೇಡ್ ಸಂಸ್ಥಾಪಕ, ಖ್ಯಾತ ವಾಗ್ಮಿ, ಚಿಂತಕ ಹಾಗೂ ಸಾಮಾಜಿಕ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆ ಅವರಿಗೆ ಪಿತೃವಿಯೋಗವಾಗಿದೆ. ಅವರ ತಂದೆ ದೇವಿದಾಸ್ ಸುಬ್ರಾಯ ಶೇಟ್ ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು.

ದೇವದಾಸ್ ಸುಬ್ರಾಯ ಶೇಟ್ ಅವರು ಸೂಲಿಬೆಲೆಯ ಸರ್ಕಾರಿ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದರು. ಸುಮಾರು 20 ವರ್ಷಗಳ ಹಿಂದೆ ಶಿಕ್ಷಕ ವೃತ್ತಿಯಿಂದ ನಿವೃತ್ತಿ ಹೊಂದಿ, ಸೂಲಿಬೆಲೆಯ ಶಾರದ ಮಂದಿರದಲ್ಲಿ ನೆಲೆಸಿದ್ದರು. ಅವರು ವಿವೇಕಾನಂದ ಪ್ರೌಢಶಾಲೆಯಲ್ಲಿ ಆರು ವರ್ಷಗಳ ಕಾಲ ಮುಖ್ಯ ಶಿಕ್ಷಕರಾಗಿದ್ದರು ಮತ್ತು ಕನ್ನಡ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಮೂಲತಃ ಹೊನ್ನಾವರದವರಾದ ಶೇಟ್ ಅವರು ಶಿಕ್ಷಕ ವೃತ್ತಿ ಸೂಲಿಬೆಲೆಯಲ್ಲಿ ಪ್ರಾರಂಭಿಸಿ ಅಲ್ಲಿಯೇ ನೆಲೆಸಿದ್ದರು.

ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

  • ಮಾಜಿ ಸಂಸದ ಪ್ರತಾಪ್ ಸಿಂಹ: “ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.”
  • ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ: “ಈ ಅಗಲಿಕೆಯ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ, ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ.”
  • ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್: “ಸಮಾಜಕ್ಕೆ ಆದರ್ಶವಂತನನ್ನು ನೀಡಿದ ತೀರ್ಥರೂಪರಾದ ದೇವಿದಾಸ್ ಶೇಟ್ ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ.”

ದೇವದಾಸ್ ಸುಬ್ರಾಯ ಶೇಟ್ ಅವರ ಅಂತಿಮ ಸಂಸ್ಕಾರ ಸೂಲಿಬೆಲೆ ಬ್ರಾಹ್ಮಣರ ಸ್ಮಶಾನದಲ್ಲಿ ಇಂದು ಸಂಜೆ ನೆರವೇರಲಿದೆ.

ರಾಜ್ಯ ರಾಷ್ಟ್ರೀಯ