ಮಹಾರಾಷ್ಟ್ರ ಪೊಲೀಸರು ಯಶವಂತ ಗಟ್ಟಿ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಈತ ಪ್ರೊಫೆಸರ್ ಪ್ರವೀಣ್ ಲೋಬೊ ಎಂಬ ಹೆಸರಿನಲ್ಲಿ ಫೇಕ್ ಐಡಿ ಮಾಡಿಕೊಂಡು, ಕೊಲೆಯಾದ ರೇಣುಕಸ್ವಾಮಿ ಪ್ರಕರಣದಲ್ಲಿ ಆರೋಪಿಗಳ ಪರ ನಿಂತು ಅಸಹ್ಯಕರ ಕಾಮೆಂಟ್‌ಗಳನ್ನು ಮಾಡುತ್ತಿದ್ದನೆಂಬ ಆರೋಪ ಕೇಳಿಬಂದಿದೆ. ಅದಲ್ಲದೆ ಧರ್ಮಸ್ಥಳ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ಆರೋಪಿಗಳ ಪರವಾಗಿ ನಿಂತು, ಹೋರಾಟಗಾರರನ್ನು ಕೆಟ್ಟ ಶಬ್ದಗಳಲ್ಲಿ ಟ್ರೋಲ್ ಮಾಡುತ್ತಿದ್ದನೆಂಬುದೂ ತಿಳಿದು ಬಂದಿದೆ.”



ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯರ ವಿರುದ್ಧ ಅಸಭ್ಯ, ಕೊಳಚೆ ಭಾಷೆ ಬಳಸಿ ಟ್ರೋಲ್ ಮಾಡುತ್ತಿದ್ದ ಈತನ ವಿರುದ್ಧ ಹಲವರಿಂದ ದೂರು ದಾಖಲಾಗಿದೆ. ದೂರು ಆಧರಿಸಿ ಪೊಲೀಸರು ಇವನ ನಿಜ ಮುಖವನ್ನು ಬಹಿರಂಗಪಡಿಸಿದ್ದಾರೆ.
ಪೋಸ್ಟ್‌ಗಳಿಗೆ ಬೆಂಬಲ ನೀಡುತ್ತಿದ್ದ ಇವನ ಸಹಚರರ ಗ್ಯಾಂಗ್ ಕೂಡಾ ತನಿಖೆಯ ಒಳಗಾಗಿದೆ. ಇವನಿಗೆ ಈ ಕೆಲಸಕ್ಕೆ ಬೆಂಬಲ, ಫಂಡಿಂಗ್ ನೀಡಿದವರು ಯಾರು ಎಂಬುದರ ಬಗ್ಗೆ ಈಗಾಗಲೇ ಅನುಮಾನಗಳು ವ್ಯಕ್ತವಾಗಿವೆ.
ಸಮಾಜ ಮಾಧ್ಯಮವನ್ನು ದುರುಪಯೋಗ ಮಾಡಿಕೊಂಡು ಇಂತಹ ಕೃತ್ಯಗಳಿಗೆ ಕೈಹಾಕುತ್ತಿರುವವರ ವಿರುದ್ಧ ಕಾನೂನು ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಸಾಮಾಜಿಕ ವಲಯದಲ್ಲಿ ಕೇಳಿ ಬರುತ್ತಿದೆ

