ಆಪರೇಶನ್ ಗುಡ್ಡರ್ : ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಆಪರೇಶನ್ ಗುಡ್ಡರ್ : ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಜಮ್ಮು-ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಗುಡ್ಡರ್ ಅರಣ್ಯ ಪ್ರದೇಶದಲ್ಲಿ ಇಂದು (ಸೆಪ್ಟೆಂಬರ್ 8) ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಈ ವೇಳೆ ಮೂವರು ಭಾರತೀಯ ಸೈನಿಕರು ಗಾಯಗೊಂಡಿದ್ದಾರೆ ಎಂದು ಪಿಟಿಐ ವರದಿ ತಿಳಿಸಿದೆ.

ಗುಡ್ಡರ್ ಆಪರೇಶನ್ ಎಂದು ಹೆಸರಿಸಲ್ಪಟ್ಟ ಈ ದಾಳಿ ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೊಲೀಸ್ ಹಾಗೂ ಸಿಆರ್‌ಪಿಎಫ್‌ ಸಂಯುಕ್ತ ಕಾರ್ಯಾಚರಣೆಯಾಗಿದೆ. ಉಗ್ರರ ಅಡಗುತಾಣದ ಕುರಿತು ಖಚಿತ ಮಾಹಿತಿಯನ್ನು ಪಡೆದುಕೊಂಡು ಭದ್ರತಾ ಪಡೆಗಳು ತೀವ್ರ ಶೋಧ ಕಾರ್ಯಾಚರಣೆ ನಡೆಸಿದವು.

ಚಿನಾರ್ ಸೇನಾ ಮಾಹಿತಿ ಪ್ರಕಾರ, “ಗುಡ್ಡರ್ ಅರಣ್ಯದಲ್ಲಿ ನಡೆಯುತ್ತಿರುವ ಆಪರೇಶನ್‌ನಲ್ಲಿ ಮತ್ತೊಬ್ಬ ಉಗ್ರನನ್ನು ಹೊಡೆದುರುಳಿಸಲಾಗಿದೆ. ಒಬ್ಬ ಸೈನಿಕ ಗಾಯಗೊಂಡಿದ್ದು, ಅವನನ್ನು ತಕ್ಷಣ ವೈದ್ಯಕೀಯ ಚಿಕಿತ್ಸೆಗೆ ಸಾಗಿಸಲಾಗಿದೆ. ಹತರಾದ ಉಗ್ರರ ಗುರುತು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ” ಎಂದು ತಿಳಿಸಿದೆ.

ಅಪರಾಧ ರಾಷ್ಟ್ರೀಯ