ಭಾರೀ ಪ್ರವಾಹ ಹಾನಿ ಪರಿಶೀಲನೆಗೆ ನಾಳೆ ಪಂಜಾಬ್‌ಗೆ ಪ್ರಧಾನಿ ಮೋದಿ

ಭಾರೀ ಪ್ರವಾಹ ಹಾನಿ ಪರಿಶೀಲನೆಗೆ ನಾಳೆ ಪಂಜಾಬ್‌ಗೆ ಪ್ರಧಾನಿ ಮೋದಿ

ಪಂಜಾಬ್ ರಾಜ್ಯದಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹ ಪರಿಸ್ಥಿತಿ ಗಂಭೀರವಾಗಿದ್ದು, ಇದುವರೆಗೆ 46 ಜನರು ಪ್ರಾಣ ಕಳೆದುಕೊಂಡಿದ್ದಾರೆ. 1.5 ಲಕ್ಷಕ್ಕೂ ಹೆಚ್ಚು ಜನರು ಬಾಧಿತರಾಗಿದ್ದು, ನೂರಾರು ಗ್ರಾಮಗಳು ಪ್ರವಾಹದಿಂದ ತತ್ತರಿಸಿವೆ. ಹೊಲಗಳಲ್ಲಿ ಮರಳು ಮತ್ತು ಮಣ್ಣು ತುಂಬಿಕೊಂಡಿರುವ ಕಾರಣ ರೈತರಿಗೆ ಭಾರೀ ಆರ್ಥಿಕ ನಷ್ಟ ಉಂಟಾಗಿದೆ. ಈ ನಡುವೆ ರೈತರ ನೆರವಿಗಾಗಿ ಮಣ್ಣು ತೆಗೆದು ಮಾರಲು ಅವಕಾಶ ಕಲ್ಪಿಸುವ ಯೋಜನೆಯನ್ನು ರಾಜ್ಯ ಸರ್ಕಾರ ರೂಪಿಸಿದೆ.

ಮುಂದುವರೆದ ಮಳೆಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿರುವುದರಿಂದ ಪರಿಸ್ಥಿತಿ ಇನ್ನಷ್ಟು ಕಠಿಣವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೆಪ್ಟೆಂಬರ್ 9ರಂದು ಪಂಜಾಬ್‌ಗೆ ಭೇಟಿ ನೀಡಿ ಪ್ರವಾಹ ಪೀಡಿತ ಪ್ರದೇಶಗಳನ್ನು ಸ್ವತಃ ಪರಿಶೀಲಿಸಲಿದ್ದಾರೆ. ಸ್ಥಳೀಯ ಸ್ಥಿತಿಗತಿಗಳ ಅವಲೋಕನದ ಜೊತೆಗೆ ಪರಿಹಾರ ಮತ್ತು ಪುನರ್ವಸತಿ ಕ್ರಮಗಳನ್ನು ವೇಗಗೊಳಿಸಲು ಅವರು ಅಧಿಕಾರಿಗಳಿಗೆ ಸೂಚನೆ ನೀಡುವ ನಿರೀಕ್ಷೆಯಿದೆ.

ರಾಷ್ಟ್ರೀಯ ಹವಾಮಾನ ವರದಿ