ಹಿಂದುಳಿದ ವರ್ಗಗಳ ಇಲಾಖೆಯ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಇಲಾಖೆಯ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಬೆಂಗಳೂರು, ಸೆ. 04:
ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 2025-26ನೇ ಸಾಲಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವರ್ಗ–1, 2ಎ, 2ಬಿ, 3ಎ, 3ಬಿ, ಪ.ಜಾ ಮತ್ತು ಪ.ವರ್ಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದೆ.

ಆದಾಯ ಮಿತಿ:

  • ಪವರ್ಗ-1, ಎಸ್.ಸಿ. ಮತ್ತು ಎಸ್.ಟಿ. ವಿದ್ಯಾರ್ಥಿಗಳಿಗೆ: ವಾರ್ಷಿಕ ಆದಾಯ ₹2.50 ಲಕ್ಷ
  • ಇತರ ವರ್ಗಗಳಿಗೆ: ವಾರ್ಷಿಕ ಆದಾಯ ₹1.00 ಲಕ್ಷ

ಅರ್ಜಿ ಸಲ್ಲಿಸುವ ವಿಧಾನ:

  • ವಿದ್ಯಾರ್ಥಿಗಳು https://shp.karnataka.gov.in/bcwd ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಅರ್ಜಿ ಸಲ್ಲಿಸಬೇಕು.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04.10.2025.

ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಬೇಕಾದ ಅರ್ಹತೆ, ದಾಖಲೆಗಳು ಹಾಗೂ ಸರ್ಕಾರಿ ಆದೇಶಗಳ ವಿವರಗಳನ್ನು https://bcwd.karnataka.gov.in/ ನಲ್ಲಿ ವೀಕ್ಷಿಸಬಹುದು.

ಸಹಾಯಕ್ಕಾಗಿ:

  • ಇ-ಮೇಲ್: bawdhelpline@gmail.com
  • ಸಹಾಯವಾಣಿ ಸಂಖ್ಯೆ: 8050770004, 8050770005
  • ಜಿಲ್ಲಾ/ತಾಲ್ಲೂಕು ಅಧಿಕಾರಿಗಳನ್ನು ಸಂಪರ್ಕಿಸಬಹುದು.

ಆಯುಕ್ತರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು.

ರಾಜ್ಯ ಶೈಕ್ಷಣಿಕ