ಡಾ. ವಿಷ್ಣುವರ್ಧನ್ ಹಾಗೂ ಹಿರಿಯ ನಟಿ ಬಿ. ಸರೋಜಾ ದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ

ಡಾ. ವಿಷ್ಣುವರ್ಧನ್ ಹಾಗೂ ಹಿರಿಯ ನಟಿ ಬಿ. ಸರೋಜಾ ದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ

ಬೆಂಗಳೂರು, ಸೆಪ್ಟೆಂಬರ್ 11: ಇಂದು ನಡೆದ ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಹಲವಾರು ಪ್ರಮುಖ ತೀರ್ಮಾನಗಳನ್ನು ಕೈಗೊಂಡಿದೆ.

ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು ನೀಡಿದ ಮಾಹಿತಿಯ ಪ್ರಕಾರ, ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ನಿರ್ಧಾರವನ್ನು ಕ್ಯಾಬಿನೆಟ್ ಕೈಗೊಂಡಿದೆ.

ಅದರ ಜೊತೆಗೆ, ಕರ್ನಾಟಕ ರತ್ನ ಪ್ರಶಸ್ತಿಯನ್ನು ಕನ್ನಡದ ಪ್ರಸಿದ್ಧ ಚಲನಚಿತ್ರ ನಟ ಡಾ. ವಿಷ್ಣುವರ್ಧನ್ ಹಾಗೂ ಹಿರಿಯ ನಟಿ ಬಿ. ಸರೋಜಾ ದೇವಿ ಅವರಿಗೆ ಮರಣೋತ್ತರವಾಗಿ ಪ್ರದಾನ ಮಾಡಲು ಸರ್ಕಾರ ತೀರ್ಮಾನಿಸಿದೆ.

ಹೆಚ್ಚುವರಿಯಾಗಿ, ಸೆಪ್ಟೆಂಬರ್ 12ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ, ಭದ್ರಾ ಮೇಲ್ದಂಡೆ ಯೋಜನೆ ಕುರಿತು ಚರ್ಚೆ ನಡೆಯಲಿದ್ದು, ಈ ಯೋಜನೆಗಾಗಿ ಸುಮಾರು 75,000 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳುವ ನಿರ್ಧಾರವೂ ಕೈಗೊಳ್ಳಲಾಗಿದೆ, ಎಂದು ಪಾಟೀಲ್ ತಿಳಿಸಿದ್ದಾರೆ.

ಮನೋರಂಜನೆ