ಇಂದೋರ್‌ನ ಶಿಕ್ಷಕ್ ನಗರದಲ್ಲಿ ಸೆಪ್ಟೆಂಬರ್ 15ರಂದು ಭೀಕರ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಒಂದು ಟ್ರಕ್ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು, ಇಬ್ಬರು ಸಾವನ್ನಪ್ಪಿದ್ದು ಎಂಟು ಮಂದಿ ಗಾಯಗೊಂಡಿದ್ದಾರೆ.

ಅಪಘಾತದ ಬಳಿಕ ಟ್ರಕ್ ಬಡಾ ಗಣಪತಿ ಬಳಿ ನಿಂತು ಬೆಂಕಿ ಹೊತ್ತಿಕೊಂಡಿತು. ಮದ್ಯಪಾನ ಮಾಡಿದ್ದ ಚಾಲಕ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿ ಎರಡು ಮತ್ತು ನಾಲ್ಕು ಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಜನರಲ್ಲಿ ಆತಂಕ ಸೃಷ್ಠಿಸಿದನು. ಬಳಿಕ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡಿದೆ. MP 09 JP 4069 ನಂಬರಿನ ಟ್ರಕ್ ಅಪಘಾತಕ್ಕೀಡಾಗಿದ್ದು, ಹೆಚ್ಚುವರಿ ಪೊಲೀಸ್ ಆಯುಕ್ತ ಅಮಿತ್ ಸಿಂಗ್ ಅವರು, ಟ್ರಕ್ 2–3 ವಾಹನಗಳಿಗೆ ಡಿಕ್ಕಿ ಹೊಡೆದು ಬಳಿಕ ಬೆಂಕಿ ಹೊತ್ತಿಕೊಂಡಿತೆಂದು ತಿಳಿಸಿದ್ದಾರೆ.
ರಕ್ಷಣಾ ಕಾರ್ಯಗಳು ನಡೆಯುತ್ತಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

