ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ‘ಮಾಸ್ಕ್ ಮ್ಯಾನ್’ ಚಿನ್ನಯ್ಯ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

ಪ್ರಕರಣದ ವಿವರ ಪ್ರಕಾರ, ಚಿನ್ನಯ್ಯನ ವಿರುದ್ಧ ಗಂಭೀರ ಆರೋಪಗಳು ದಾಖಲಾಗಿದ್ದು, ತನಿಖೆ ಇನ್ನೂ ಪ್ರಗತಿಯಲ್ಲಿದೆ. ಈ ಹಿನ್ನಲೆಯಲ್ಲಿ, ಪ್ರಸ್ತುತ ಹಂತದಲ್ಲಿ ಜಾಮೀನು ನೀಡುವುದು ಸೂಕ್ತವಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಚಿನ್ನಯ್ಯ ವಿರುದ್ಧ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಅವನು ಹೊರಗೆ ಬಂದರೆ ಸಾಕ್ಷ್ಯಾಧಾರಗಳನ್ನು ಹಾಳುಮಾಡುವ ಅಥವಾ ಸಾಕ್ಷಿದಾರರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಅಭಿಯೋಜಕ ವಾದ ಮಂಡಿಸಿದರು. ಇದನ್ನು ಪರಿಗಣಿಸಿದ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

