ಕೋಲಾರ ಮಾಲೂರು ಕ್ಷೇತ್ರದ ಶಾಸಕ ನಂಜೇಗೌಡ ಅವರ ಆಯ್ಕೆ ಅಮಾನ್ಯ: ಹೈಕೋರ್ಟ್ ಮರು ಮತ ಎಣಿಕೆ ಆದೇಶ

ಕೋಲಾರ ಮಾಲೂರು ಕ್ಷೇತ್ರದ ಶಾಸಕ ನಂಜೇಗೌಡ ಅವರ ಆಯ್ಕೆ ಅಮಾನ್ಯ: ಹೈಕೋರ್ಟ್ ಮರು ಮತ ಎಣಿಕೆ ಆದೇಶ

ಬೆಂಗಳೂರು (ಸೆ.16): ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ವೈ. ನಂಜೇಗೌಡ ಅವರ ಆಯ್ಕೆಯನ್ನು ಹೈಕೋರ್ಟ್ ಅಮಾನ್ಯಗೊಳಿಸಿದೆ. ನಾಲ್ಕು ವಾರಗಳೊಳಗೆ ಮರು ಮತ ಎಣಿಕೆ ನಡೆಸುವಂತೆ ಜಿಲ್ಲಾ ಚುನಾವಣಾಧಿಕಾರಿಗೆ ನ್ಯಾಯಾಲಯ ಆದೇಶ ನೀಡಿದೆ.

ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಹೈಕೋರ್ಟ್ ಪೀಠ ಈ ತೀರ್ಪನ್ನು ಪ್ರಕಟಿಸಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ ನಂಜೇಗೌಡ ಅವರ ಗೆಲುವನ್ನು ಪ್ರಶ್ನಿಸಿ ಅವರ ಪ್ರತಿಸ್ಪರ್ಧಿ ಹಾಗೂ ಮಾಜಿ ಶಾಸಕ ಹೂಡಿ ವಿಜಯ್ ಕುಮಾರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಮತ ಎಣಿಕೆಯ ವಿಡಿಯೋ ದಾಖಲೆಗಳನ್ನು ಜಿಲ್ಲಾ ಚುನಾವಣಾಧಿಕಾರಿ ನ್ಯಾಯಾಲಯಕ್ಕೆ ಸಲ್ಲಿಸಲು ವಿಫಲರಾದರು.

ಈ ನಿರ್ಲಕ್ಷ್ಯವನ್ನು ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್, ಜಿಲ್ಲಾ ಚುನಾವಣಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

ಮತ ಎಣಿಕೆಯ ವಿಡಿಯೋ ದಾಖಲೆಗಳಿಲ್ಲದ ಹಿನ್ನೆಲೆಯಲ್ಲಿ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಾಗದ ಕಾರಣ, ಪ್ರಜಾಪ್ರಭುತ್ವದ ಮೂಲ ತತ್ವವನ್ನು ಕಾಪಾಡುವ ನಿಟ್ಟಿನಲ್ಲಿ ಮರು ಮತ ಎಣಿಕೆ ನಡೆಸಲು ನ್ಯಾಯಾಲಯ ಆದೇಶಿಸಿದೆ.

ಅಪರಾಧ ರಾಜ್ಯ