ರಾಜ್ಯದಲ್ಲಿ 18,500 ಹೊಸ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಘೋಷಣೆ

ರಾಜ್ಯದಲ್ಲಿ 18,500 ಹೊಸ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಘೋಷಣೆ

ಚಾಮರಾಜನಗರ: ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಬೋಧನಾ ಶಕ್ತಿ ಹೆಚ್ಚಿಸಲು ರಾಜ್ಯದಲ್ಲಿ ಹೆಚ್ಚುವರಿಯಾಗಿ 18,500 ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಘೋಷಿಸಿದರು.

ಸಚಿವರು ಮಾತನಾಡಿ, “ನಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತರ ಈಗಾಗಲೇ 13,500 ಶಿಕ್ಷಕರನ್ನು ನೇಮಕ ಮಾಡಿದ್ದೇವೆ. ಹಿಂದಿನ ಬಿಜೆಪಿ ಸರ್ಕಾರ ಕೇವಲ 5,428 ಶಿಕ್ಷಕರನ್ನು ನೇಮಿಸಿತ್ತು. ಶಾಲೆಗಳ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ನಾವು ಹೆಚ್ಚಿನ ಒತ್ತು ನೀಡುತ್ತಿದ್ದೇವೆ” ಎಂದು ತಿಳಿಸಿದರು.

ಅದರ ಜೊತೆಗೆ, ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿಗಳ ದುರಸ್ತಿ ಕಾರ್ಯ ಕೈಗೊಳ್ಳಲಾಗುವುದು ಹಾಗೂ ರಾಜ್ಯದಾದ್ಯಂತ 800 ಹೊಸ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ತೆರೆಯುವ ಚಿಂತನೆ ನಡೆಸಲಾಗುತ್ತಿದೆ ಎಂದರು.

ರಾಜ್ಯ ಶೈಕ್ಷಣಿಕ