ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ದೂರವಾಣಿ ಸಂಭಾಷಣೆ ನಡೆಸಿದರು. ಈ ಸಂದರ್ಭದಲ್ಲಿ ಟ್ರಂಪ್, ಮೋದಿ ಅವರಿಗೆ 75ನೇ ಜನ್ಮದಿನದ ಹಾರೈಕೆಗಳನ್ನು ತಿಳಿಸಿದರು.

ಮೋದಿಯವರು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡುತ್ತಾ, “ಧನ್ಯವಾದಗಳು ನನ್ನ ಸ್ನೇಹಿತ ಟ್ರಂಪ್‌ಜಿ, ನಿಮ್ಮ ದೂರವಾಣಿ ಕರೆ ಹಾಗೂ ನನ್ನ 75ನೇ ಜನ್ಮದಿನದ ಹಾರೈಕೆಗಳಿಗೆ. ನಿಮ್ಮಂತೆ ನಾನೂ ಭಾರತ–ಅಮೆರಿಕಾ ಸಮಗ್ರ ಜಾಗತಿಕ ಸಹಭಾಗಿತ್ವವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಬದ್ಧನಾಗಿದ್ದೇನೆ. ಉಕ್ರೇನ್ ಸಂಘರ್ಷಕ್ಕೆ ಶಾಂತಿಯುತ ಪರಿಹಾರ ಕಂಡುಕೊಳ್ಳುವ ನಿಮ್ಮ ಪ್ರಯತ್ನಗಳಿಗೆ ಭಾರತ ಸಂಪೂರ್ಣ ಬೆಂಬಲ ನೀಡುತ್ತದೆ” ಎಂದು ಹೇಳಿದ್ದಾರೆ.
ಇದೇ ವೇಳೆ, ಟ್ರಂಪ್ ಕೂಡ ತಮ್ಮ ಸಾಮಾಜಿಕ ಜಾಲತಾಣದಲ್ಲಿ, “ಅದ್ಭುತ ಮಾತುಕತೆ ನಡೆಯಿತು. ರಷ್ಯಾ–ಉಕ್ರೇನ್ ಯುದ್ಧ ಅಂತ್ಯಕ್ಕೆ ನನ್ನ ಪ್ರಯತ್ನಗಳಿಗೆ ನೀಡಿದ ಬೆಂಬಲಕ್ಕಾಗಿ ಪ್ರಧಾನಮಂತ್ರಿ ಮೋದಿ ಅವರಿಗೆ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

