ಪುತ್ತೂರು: ಸಣ್ಣ ನೀರಾವರಿ ಇಲಾಖೆಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಐದು ಕಿಂಡಿ ಅಣೆಕಟ್ಟಿನ ನಿರ್ಮಾಣಕ್ಕೆ 5.70 ಕೋಟಿ ರೂಪಾಯಿಗಳ ಅನುದಾನ ಮಂಜೂರಾಗಿದೆ. ಹಲವು ವರ್ಷಗಳಿಂದ ಈ ಅಣೆಕಟ್ಟುಗಳ ನಿರ್ಮಾಣಕ್ಕಾಗಿ ಬೇಡಿಕೆ ಮುಂದುವರಿದಿದ್ದು, ಇದೀಗ ಸರ್ಕಾರದಿಂದ ಅನುಮೋದನೆ ದೊರೆತಿದೆ.

ಇನ್ನೂ ಹಲವು ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಹಾಗೂ ಅವುಗಳನ್ನು ಸಹ ಮಂಜೂರು ಮಾಡುವ ವಿಶ್ವಾಸ ವ್ಯಕ್ತಪಡಿಸಿರುವ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಈ ಅನುದಾನವನ್ನು ಮಂಜೂರುಗೊಳಿಸಿದ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.

