ಕೊಡಗು: ವಿರಾಜಪೇಟೆಯಲ್ಲಿ ಬ್ಯೂಟಿ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ಬಯಲು, ಇಬ್ಬರು ಬಂಧನ

ಕೊಡಗು: ವಿರಾಜಪೇಟೆಯಲ್ಲಿ ಬ್ಯೂಟಿ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ಬಯಲು, ಇಬ್ಬರು ಬಂಧನ

ಕೊಡಗು (ಸೆ.19): ರಾಜ್ಯದಲ್ಲಿ ವೇಶ್ಯಾವಾಟಿಕೆ ದಂಧೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದೀಗ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲೂ ಬ್ಯೂಟಿ ಪಾರ್ಲರ್ ಹೆಸರಿನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಬಯಲಾಗಿದೆ.

ವಿರಾಜಪೇಟೆ ಪೊಲೀಸರು ನಡೆಸಿದ ದಾಳಿಯಲ್ಲಿ ಕೇರಳ ಮೂಲದ ಶಿಜು ಮತ್ತು ಪ್ರದೀಪ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಖಾಸಗಿ ಬ್ಯೂಟಿ ಪಾರ್ಲರ್ ಮತ್ತು ಕ್ಲಬ್ ಹೆಸರಿನಲ್ಲಿ ಈ ಅಕ್ರಮ ಚಟುವಟಿಕೆ ನಡೆಯುತ್ತಿತ್ತು ಎಂದು ತನಿಖೆಯಿಂದ ಬೆಳಕಿಗೆ ಬಂದಿದೆ.

ದಾಳಿಯ ವೇಳೆ ರಾಜ್ಯದ ವಿವಿಧ ಭಾಗಗಳಿಂದ ಕರೆತರಲಾಗಿದ್ದ ನಾಲ್ವರು ಮಹಿಳೆಯರನ್ನು ರಕ್ಷಿಸಲಾಗಿದೆ. ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ದಂಧೆಯ ಮೂಲವರೆಗೂ ತಲುಪಲು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಸ್ಥಳೀಯರು ಈ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯದಲ್ಲಿ ಹೆಚ್ಚುತ್ತಿರುವ ವೇಶ್ಯಾವಾಟಿಕೆ ದಂಧೆಯನ್ನು ತಡೆಯಲು ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರ ಮತ್ತು ಪೊಲೀಸರಿಗೆ ಆಗ್ರಹಿಸಿದ್ದಾರೆ.

ಅಪರಾಧ