ಪುತ್ತೂರು ಅಭಿವೃದ್ಧಿಗೆ ಶಾಸಕರಾದ ಅಶೋಕ್ ಕುಮಾರ್ ರೈ ಮನವಿ –  ಭರವಸೆ  ನೀಡಿದ ಸಿಎಂ ಸಿದ್ದರಾಮಯ್ಯ

ಪುತ್ತೂರು ಅಭಿವೃದ್ಧಿಗೆ ಶಾಸಕರಾದ ಅಶೋಕ್ ಕುಮಾರ್ ರೈ ಮನವಿ – ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ಅವರು ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಹಲವು ಪ್ರಮುಖ ಬೇಡಿಕೆಗಳ ಕುರಿತಂತೆ ಮನವಿ ಸಲ್ಲಿಸಿದರು.

ಬೆಳ್ಳಿಪ್ಪಾಡಿಯಲ್ಲಿ ಮೊಗೇರ ಸಂಘಕ್ಕೆ ಜಾಗ ಮಂಜೂರು, ಕೆದಿಲದಲ್ಲಿ ಕ್ರೀಡಾಂಗಣಕ್ಕೆ 50 ಲಕ್ಷ ರೂ. ಅನುದಾನ ಹಾಗೂ ಪುತ್ತೂರು ಮೆಡಿಕಲ್ ಕಾಲೇಜು ಸಭೆ ನಿಗದಿ ಕುರಿತ ಬೇಡಿಕೆಗಳನ್ನು ಶಾಸಕರು ಮಂಡಿಸಿದರು.

ಮನವಿಯನ್ನು ಪುರಸ್ಕರಿಸಿದ ಸಿಎಂ ಸಿದ್ದರಾಮಯ್ಯ ಅವರು, ಮುಂದಿನ ತಿಂಗಳು ತಮ್ಮ ನೇತೃತ್ವದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಸಭೆ ನಡೆಸಿ, ಅಗತ್ಯ ಕ್ರಮಗಳ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ರಾಜ್ಯ