ಬೆಂಗಳೂರು: ಹಾಲಿನ ಉತ್ಪನ್ನಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಶೇ. 12ರಿಂದ ಶೇ. 5ಕ್ಕೆ ಇಳಿಕೆ ಮಾಡಿದ ಹಿನ್ನೆಲೆಯಲ್ಲಿ, ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್) ನಂದಿನಿ ಉತ್ಪನ್ನಗಳ ದರವನ್ನು ಕಡಿಮೆ ಮಾಡಲು ನಿರ್ಧರಿಸಿದೆ.

ಸೆಪ್ಟೆಂಬರ್ 22ರಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದ್ದು, ನಂದಿನಿ ತುಪ್ಪ, ಬೆಣ್ಣೆ, ಚೀಸ್, ಪನ್ನೀರ್, ಮೊಸರು, ಲಸ್ಸಿ ಹಾಗೂ ಗುಡ್ ಲೈಫ್ ಹಾಲು ಸೇರಿದಂತೆ ಹಲವು ಉತ್ಪನ್ನಗಳ ಬೆಲೆ ಇಳಿಯಲಿದೆ. ಮೊಸರಿನ ದರ ಲೀಟರ್‌ಗೆ 4 ರೂ.ವರೆಗೆ ಕಡಿಮೆಯಾಗುವ ನಿರೀಕ್ಷೆ ಇದೆ.
ಕೆಎಂಎಫ್ ಎಂಡಿ ಬಿ. ಶಿವಸ್ವಾಮಿ ಅವರು, ಸೆ. 22ರಿಂದ ನಂದಿನಿ ಉತ್ಪನ್ನಗಳ ದರ ಶೇ. 7ರಷ್ಟು ಕಡಿಮೆಯಾಗಲಿದ್ದು, ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.

