ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಮುಂದಿನ ವರ್ಷ ಮಾರ್ಚ್ ವೇಳೆಗೆ ದೇಶದಿಂದ ಎಡಪಂಥೀಯ ಅತಿರೇಕವನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಕಳೆದ ಹಲವು ದಶಕಗಳಿಂದ ದೇಶದ ಒಳಭಾಗದಲ್ಲಿ ಅತಿರೇಕಿ ಚಟುವಟಿಕೆಗಳಿಂದ ಜನತೆ ಸಂಕಷ್ಟ ಅನುಭವಿಸುತ್ತಿದ್ದು, ಈಗ ಅದನ್ನು ಸಂಪೂರ್ಣ ತೊಡೆದು ಹಾಕುವ ಕಾರ್ಯ ಅಂತಿಮ ಹಂತದಲ್ಲಿದೆ ಎಂದು ಅವರು ಹೇಳಿದ್ದಾರೆ.

ಅಮಿತ್ ಶಾ ಅವರ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸರ್ಕಾರ ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳ ಫಲವಾಗಿ ಎಡಪಂಥೀಯ ಅತಿರೇಕವು ಈಗ ತೀವ್ರ ಹಿನ್ನಡೆ ಅನುಭವಿಸುತ್ತಿದೆ. ಮುಂದಿನ ವರ್ಷ ಮಾರ್ಚ್ ವೇಳೆಗೆ ಇದರ ಶಾಶ್ವತ ಅಂತ್ಯವಾಗುವುದು ಖಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು

