ಮಂಗಳೂರು: ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣದಲ್ಲಿ ಬಂಧನ ಭೀತಿ ಎದುರಾಗಿದೆ.

ಆರೋಪಿ ಚಿನ್ನಯ್ಯ ಬಂಧನದ ನಂತರ ತಿಮರೋಡಿಯೇ ಆಶ್ರಯ ನೀಡಿದ್ದಾನೆಂದು ಬಾಯ್ಬಿಟ್ಟಿದ್ದರಿಂದ, ಉಜಿರೆಯಲ್ಲಿರುವ ಅವರ ಮನೆಯಲ್ಲಿ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಮಾರಕಾಸ್ತ್ರಗಳು ಸೇರಿದಂತೆ 5.5 ಎಂಎಂ ಏರ್ ಗನ್ ಪತ್ತೆಯಾಗಿ ವಶಪಡಿಸಿಕೊಳ್ಳಲಾಗಿದೆ.
ಇದರಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಲ್ಪಟ್ಟಿದ್ದು, ವಿಚಾರಣೆಗೆ ಇಂದು ಹಾಜರಾಗುವಂತೆ ಸೂಚಿಸಲಾಗಿದೆ.

