ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನಗಳ ಅಭಿವೃದ್ದಿ ಕಾರ್ಯಗಳ ಕುರಿತು ಮುಜರಾಯಿ ಖಾತೆ ಸಚಿವರಾದ ರಾಮಲಿಂಗಾ ರೆಡ್ಡಿಯವರೊಂದಿಗೆ ಮಾತುಕತೆ ನಡೆಯಿತು.

ಪುತ್ತೂರು ದೇವಳದ ಅಭಿವೃದ್ದಿಗೆ ಈಗಾಗಲೇ ಮಾಸ್ಟರ್ ಪ್ಲಾನ್ ಸಿದ್ಧಗೊಂಡಿದ್ದು, ಅನುದಾನ ಹಾಗೂ ಮುಜರಾಯಿ ಇಲಾಖೆಯಿಂದ ನೆರವು ಪಡೆಯುವ ಕುರಿತು ಸಚಿವರೊಂದಿಗೆ ಚರ್ಚಿಸಲಾಯಿತು.
ಇದೇ ವೇಳೆ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಸುಮಾರು ₹352 ಕೋಟಿ ವೆಚ್ಚದಲ್ಲಿ ಮಾಸ್ಟರ್ ಪ್ಲಾನ್ ಸಿದ್ಧಗೊಂಡಿರುವ ಬಗ್ಗೆ ಸಚಿವರಿಗೆ ಮಾಹಿತಿ ನೀಡಲಾಯಿತು. ದೇವಸ್ಥಾನಕ್ಕಾಗಿ ಜಾಗ ಖರೀದಿಸುವ ಅವಶ್ಯಕತೆ ಇರುವುದರಿಂದ ಇಲಾಖೆಯ ಅನುಮತಿ ಪಡೆಯುವ ವಿಷಯವೂ ಸಚಿವರ ಗಮನಕ್ಕೆ ತರಲಾಯಿತು.
ಎರಡೂ ದೇವಸ್ಥಾನಗಳ ಅಭಿವೃದ್ದಿ ಕಾರ್ಯಗಳ ವಿವರಗಳನ್ನು ಸಚಿವರಿಗೆ ಮಂಡಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಸದಸ್ಯರಾದ ವಿನಯಾ, ಸುಬಾಸ್, ಜಿಲ್ಲಾ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ಮುರಳೀದರ್ ರೈ ಮಟಂತಬೆಟ್ಟು, ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಹಾಜರಿದ್ದರು.

