ಪುತ್ತೂರು, ಸೆಪ್ಟೆಂಬರ್ 23: ಹಿಂದೂತ್ವ ಹೋರಾಟಕ್ಕಾಗಿ ಹಲವು ಪ್ರಕರಣಗಳನ್ನು ಹೊತ್ತುಕೊಂಡು ಕೊನೆಗೆ ರೌಡಿಶೀಟರ್ ಪಟ್ಟಿಗೆ ಸೇರಿಸಲ್ಪಟ್ಟ ಸೌಜನ್ಯ ಪರ ಹೋರಾಟಗಾರ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷದ ಗಡಿಪಾರು ಶಿಕ್ಷೆಗೆ ಒಳಪಡಿಸಲಾಗಿದೆ.

ತಿಮರೋಡಿ ವಿರುದ್ಧ ಜಿಲ್ಲೆಯಲ್ಲಿ ವಿವಿಧ ಪೊಲೀಸ್ ಠಾಣೆಗಳಲ್ಲಿ 32ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕದಡುವ ಭೀತಿಯ ಹಿನ್ನೆಲೆಯಲ್ಲಿ ಪುತ್ತೂರು ಸಹಾಯಕ ಆಯುಕ್ತರ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.
ಆದೇಶದಂತೆ, ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ಗಡಿಪಾರು ಮಾಡಲಾಗಿದೆ.

