ಏಷ್ಯಾ ಕಪ್ ಕ್ರಿಕೆಟ್ ಪೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 19.1 ಓವರ್ ನಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 146 ರನ್ ಗಳಿಸಲಷ್ಟೇ ಶಕ್ತವಾಯಿತು. ಭಾರತದ ಪರ ಕುಲದೀಪ್ ಯಾದವ್ 4 ವಿಕೆಟ್ ಪಡೆದು ಮಿಂಚಿದರು.

ಉಳಿದಂತೆ ಬುಮ್ರಾ, ವರುಣ್ ಚಕ್ರವರ್ತಿ, ಮತ್ತು ಅಕ್ಷರ್ ಪಟೇಲ್ ತಲಾ 2 ವಿಕೆಟ್ ಪಡೆದರು. ಭಾರತಕ್ಕೆ ಗೆಲ್ಲಲು 147 ರನ್ ಬೇಕಿದ್ದು ಅಭಿಮಾನಿಗಳು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

