ಕೆವಿಜಿ ಪಾಲಿಟೆಕ್ನಿಕ್ : ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ

ಕೆವಿಜಿ ಪಾಲಿಟೆಕ್ನಿಕ್ : ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ‘ಮಾನಸಿಕ ಆರೋಗ್ಯ ಜಾಗೃತಿ’
ಕಾರ್ಯಕ್ರಮ ನಡೆಯಿತು.
ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ಟಿ. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಹದಿಹರೆಯದಲ್ಲಿ ಉಂಟಾಗುವ ಮಾನಸಿಕ ಅಸಮತೋಲನ ಮತ್ತು ಅದರಿಂದ ಹೊರ ಬರುವ ಬಗ್ಗೆ ಸಲಹೆಗಳನ್ನು ನೀಡಿದರು.
ಸಮಾರಂಭದ ವೇದಿಕೆಯಲ್ಲಿ ಆಟೊಮೊಬೈಲ್ ವಿಭಾಗದ ಮುಖ್ಯಸ್ಥ ಎಂ.ಎನ್ ಚಂದ್ರಶೇಖರ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರಭುಲಿಂಗ ಡಿ.ಹೆಚ್. ಉಪಸ್ಥಿತರಿದ್ದರು. ಪ್ಲೇಸ್ಮೆಂಟ್ ಅಧಿಕಾರಿ ರಂಗಸ್ವಾಮಿ ಸ್ವಾಗತಿಸಿ, ವಂದಿಸಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಸಹಕರಿಸಿದರು.

ಶೈಕ್ಷಣಿಕ