ಬೆಂಗಳೂರು:ಗಡಿಪಾರು ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ತಾತ್ಕಾಲಿಕ ನಿರಾಳತೆ ಲಭಿಸಿದೆ. ಹೈಕೋರ್ಟ್ ಅಕ್ಟೋಬರ್ 8ರವರೆಗೆ ಗಡಿಪಾರು ಆದೇಶ ಜಾರಿಗೊಳಿಸಬಾರದೆಂದು ಮಧ್ಯಂತರ ತಡೆ ನೀಡಿದೆ.

ಈ ಸಂಬಂಧ ಹೈಕೋರ್ಟ್ ಸಿ.ಎಂ. ಪೂಣಚ್ಚ ಅವರ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು. ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ಮುಂದಿನ ವಿಚಾರಣೆಯನ್ನು ಅಕ್ಟೋಬರ್ 8ಕ್ಕೆ ಮುಂದೂಡಿದೆ.
ಗಡಿಪಾರು ಆದೇಶವನ್ನು ಸಂಪೂರ್ಣವಾಗಿ ರದ್ದು ಮಾಡುವಂತೆ ತಿಮರೋಡಿ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಈಗಾಗಲೇ ವಿಚಾರಣೆಯ ಮೊದಲ ಹಂತದಲ್ಲಿ ತಾತ್ಕಾಲಿಕ ತಡೆ ನೀಡಿರುವ ಹೈಕೋರ್ಟ್ ಅಂತಿಮ ತೀರ್ಪು ಹೇಗಿರುತ್ತದೆ ಎಂಬ ಕುತೂಹಲ ಮೂಡಿಸಿದೆ.

