ಭಾರತದ ಸುಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಅನಾಮಿಕ ಮೂಲದಿಂದ ಬಾಂಬ್ ಬೆದರಿಕೆ ಬಂದಿದೆ. ಪಾಕಿಸ್ತಾನದ ಐಎಸ್ಐ ಮತ್ತು ಮಾಜಿ ಎಲ್‌ಟಿಟಿಇ ಉಗ್ರ ಸಂಘಟನೆಗಳ ಹೆಸರಿನಲ್ಲಿ ಇಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ.

ಬೆದರಿಕೆಯ ಸಂದೇಶ ಬಂದ ತಕ್ಷಣವೇ ಭದ್ರತಾ ಪಡೆಗಳು ಕಾರ್ಯಾಚರಣೆಗೆ ನಿಂತು, ದೇವಸ್ಥಾನ ಸುತ್ತಲೂ ಉನ್ನತ ಮಟ್ಟದ ಭದ್ರತೆ ಒದಗಿಸಲಾಗಿದೆ. ಸ್ಥಳೀಯ ಪೊಲೀಸ್ ಮತ್ತು ಬಾಂಬ್ ನಿವಾರಣಾ ತಂಡಗಳು ಪ್ರಮುಖ ಸ್ಥಳಗಳಲ್ಲಿ ತೀವ್ರ ತಪಾಸಣೆ ನಡೆಸಿದ್ದಾರೆ.
ಸೈಬರ್ ಕ್ರೈಂ ಪೊಲೀಸ್ ಮತ್ತು ತನಿಖಾ ಏಜೆನ್ಸಿಗಳು ಇಮೇಲ್ ಮೂಲವನ್ನು ಪತ್ತೆಹಚ್ಚಲು ಕಾರ್ಯಾಚರಣೆ ನಡೆಸುತ್ತಿವೆ. ತಿರುಪತಿ ದೇವಸ್ಥಾನ ಸುತ್ತಲೂ ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ. ತನಿಖಾ ಏಜೆನ್ಸಿಗಳು ಈ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸುತ್ತಿವೆ.

