ಢಾಕಾ: ಬಾಂಗ್ಲಾದೇಶ ರಾಜಧಾನಿ ಢಾಕಾದ ಹಜರತ್ ಶಹಜಲಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಗೋ ಪ್ರದೇಶದಲ್ಲಿ ಇಂದು ಮಧ್ಯಾಹ್ನ ಭಾರಿ ಅಗ್ನಿ ಅವಘಡ ಸಂಭವಿಸಿದೆ.

ಬೆಂಕಿ ವ್ಯಾಪಕವಾಗುತ್ತಿದ್ದಂತೆ ಅಧಿಕಾರಿಗಳು ತುರ್ತುವಾಗಿ ಎಲ್ಲ ವಿಮಾನ ಸಂಚಾರಗಳನ್ನು ಸ್ಥಗಿತಗೊಳಿಸಿದ್ದಾರೆ.ಅಗ್ನಿಶಾಮಕ ಮತ್ತು ನಾಗರಿಕ ರಕ್ಷಣಾ ಇಲಾಖೆಯ ಮಾಹಿತಿ ಪ್ರಕಾರ, ಒಟ್ಟು 32 ಅಗ್ನಿಶಾಮಕ ಘಟಕಗಳು ಸ್ಥಳಕ್ಕೆ ತೆರಳಿದ್ದು, ಅವರಲ್ಲಿ 14 ಘಟಕಗಳು ಈಗಾಗಲೇ ಬೆಂಕಿ ನಂದಿಸುವ ಕಾರ್ಯದಲ್ಲಿವೆ ಹಾಗೂ ಉಳಿದ 18 ಘಟಕಗಳು ಸ್ಥಳಕ್ಕೆ ತೆರಳುತ್ತಿವೆ.
ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ, ಬೆಂಕಿ ನಿಯಂತ್ರಣಕ್ಕೆ ತರುವ ಪ್ರಯತ್ನಗಳು ತೀವ್ರವಾಗಿ ಮುಂದುವರಿದಿವೆ. ಬಾಂಗ್ಲಾದೇಶ ನಾಗರಿಕ ವಿಮಾನಯಾನ ಪ್ರಾಧಿಕಾರ, ಅಗ್ನಿಶಾಮಕ ದಳ ಮತ್ತು ವಾಯುಪಡೆಯ 2 ಘಟಕಗಳು ಸಂಯುಕ್ತವಾಗಿ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ ಎಂದು ಇಂಟರ್ ಸರ್ವಿಸಸ್ ಪಬ್ಲಿಕ್ ರಿಲೇಶನ್ಸ್ (ISPR) ಪ್ರಕಟಿಸಿದೆ.
ಬೆಂಕಿಯ ಕಾರಣ ಇನ್ನೂ ಪತ್ತೆಯಾಗಿಲ್ಲ ಮತ್ತು ನಷ್ಟದ ಪ್ರಮಾಣದ ವಿವರಗಳು ಬಹಿರಂಗವಾಗಿಲ್ಲ. ಆದರೆ ವಿಮಾನ ನಿಲ್ದಾಣದ ಮೂಲಗಳು ತಿಳಿಸಿರುವುದೇನಂದರೆ, ತುರ್ತು ಕಾರ್ಯಾಚರಣೆಗಳು ಮುಂದುವರಿಯುತ್ತಿರುವುದರಿಂದ ವಿಮಾನ ನಿಲ್ದಾಣದ ಎಲ್ಲಾ ಕಾರ್ಯಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ.

