ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸುಳ್ಯದ ರೋಟರಿ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ.

ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸುಳ್ಯದ ರೋಟರಿ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ.

ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ನಡೆಸಿರುವ ೨೦೨೫ನೇ ಸಾಲಿನ ಜಿಲ್ಲಾ ಮಟ್ಟದ ಪದವಿಪೂರ್ವ ವಿಭಾಗದ ಬಾಲಕ -ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯು ಅಕ್ಟೋಬರ್ ೨೭ರಂದು ಬೆಸೆಂಟ್ ನ್ಯಾಷನಲ್ ಪಿ.ಯು ಕಾಲೇಜು ಕೊಡಿಯಾಲ್ ಬೈಲ್ ಮಂಗಳೂರಿನಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ಸುಳ್ಯ ತಾಲೂಕಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಹಾಗೂ ಬಾಲಕರ ತಂಡವು ಚತುರ್ಥ ಸ್ಥಾನವನ್ನು ಪಡೆದಿದೆ.ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಕು.ರಚಿತಾ ಮತ್ತು ಮೊಹಮ್ಮದ್ ಸೈಫ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕ್ರೀಡೆ ಶೈಕ್ಷಣಿಕ