ರಾಯಪುರ, ನ. 1: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಛತ್ತೀಸ್‌ಗಢ ವಿಧಾನಸಭೆಯ ಹೊಸ ಕಟ್ಟಡದಲ್ಲಿ ಭಾರತದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮೋದಿ ಅವರು, ವಾಜಪೇಯ್ ಅವರು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿದ ಅಪರೂಪದ ನಾಯಕರಾಗಿದ್ದರು ಎಂದು ಸ್ಮರಿಸಿದರು. ಅವರು ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಜನಸೇವೆಯ ಮೌಲ್ಯಗಳನ್ನು ಜೀವಂತವಾಗಿಟ್ಟ ನಾಯಕ ಎಂದು ಹೇಳಿದರು.
ಅಟಲ್ ಬಿಹಾರಿ ವಾಜಪೇಯ್ ಅವರ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಛತ್ತೀಸ್‌ಗಢ ಮುಖ್ಯಮಂತ್ರಿ, ರಾಜ್ಯಪಾಲ ಹಾಗೂ ಹಲವಾರು ಗಣ್ಯರು ಹಾಜರಿದ್ದರು. ಹೊಸ ವಿಧಾನಸಭೆ ಕಟ್ಟಡವು ಆಧುನಿಕ ಸೌಲಭ್ಯಗಳಿಂದ ಕೂಡಿದ್ದು, ರಾಜ್ಯದ ಪ್ರಗತಿಗೆ ಪ್ರತೀಕವಾಗಲಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟರು.


