ಸುಳ್ಯ ಜಟ್ಟಿಪಳ್ಳ ದಲ್ಲಿ ನವೆಂಬರ್ 3ರಂದು ನಡೆದ ನ್ಯಾನೋ ಕಾರು ಮತ್ತು ಅಟೋ ನಡುವಿನ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಎ ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಟೋ ಚಾಲಕ ಪ್ರಭಾಕರ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರು ಪತ್ನಿ ,ಪುತ್ರ, ಪುತ್ರಿ ಮತ್ತು ಬಂಧುಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಇಂದು ಜಾಲ್ಸೂರು ನಲ್ಲಿರುವ ಅವರ ಸ್ವಗೃಹದಲ್ಲಿ ನಡೆಯಲಿದೆ.


