ಆನ್ಲೈನ್ ಬೆಟ್ಟಿಂಗ್ ಆಪ್ ಪ್ರಚಾರ ಆರೋಪ ಪ್ರಕರಣ: ಪ್ರಕಾಶ್ ರಾಜ್ ಎಸ್‌ಐಟಿ ಮುಂದೆ ಹಾಜರು

ಆನ್ಲೈನ್ ಬೆಟ್ಟಿಂಗ್ ಆಪ್ ಪ್ರಚಾರ ಆರೋಪ ಪ್ರಕರಣ: ಪ್ರಕಾಶ್ ರಾಜ್ ಎಸ್‌ಐಟಿ ಮುಂದೆ ಹಾಜರು

ಆನ್‌ಲೈನ್ ಬೆಟ್ಟಿಂಗ್ ಆಪ್ ಪ್ರಚಾರ ಪ್ರಕರಣದ ತನಿಖೆ ಹಿನ್ನೆಲೆಯಲ್ಲಿ ನಟ ಪ್ರಕಾಶ್ ರಾಜ್ ಅವರನ್ನು ತೆಲಂಗಾಣ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ (SIT) ಬುಧವಾರ ವಿಚಾರಣೆಗೊಳಪಡಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕಾಶ್ ರಾಜ್ ಅವರು ಹೈದರಾಬಾದ್‌ನಲ್ಲಿರುವ ತನಿಖಾ ದಳ ಕಚೇರಿಗೆ ಹಾಜರಾಗಿ ಅಧಿಕಾರಿಗಳಿಂದ ವಿಚಾರಣೆಗೈಯಲ್ಪಟ್ಟರು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಚಟುವಟಿಕೆಗಳನ್ನು ತಡೆಯಲು ಮತ್ತು ಪ್ರಕರಣಗಳನ್ನು ಸಂಪೂರ್ಣವಾಗಿ ತನಿಖೆ ನಡೆಸಲು ತೆಲಂಗಾಣ ಸರ್ಕಾರವು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ (CID) ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ದಳವನ್ನು ರಚಿಸಿದೆ.

ಅಪರಾಧ ರಾಷ್ಟ್ರೀಯ