IMD Weather Forecast: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ –ದಕ್ಷಿಣ ಒಳನಾಡಿಗೆ ಭಾರೀ ಮಳೆ ಸಾಧ್ಯತೆ!

IMD Weather Forecast: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ –ದಕ್ಷಿಣ ಒಳನಾಡಿಗೆ ಭಾರೀ ಮಳೆ ಸಾಧ್ಯತೆ!

ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ, ಕರ್ನಾಟಕದ ದಕ್ಷಿಣ ಒಳನಾಡು ಪ್ರದೇಶದಲ್ಲೂ ಭಾರೀ ಮಳೆಯ ನಿರೀಕ್ಷೆ ಇದೆ.

ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಪ್ರದೇಶಗಳಲ್ಲಿ ಭಾರೀ ಮಳೆಯಿಂದ ಅತಿ ಭಾರೀ ಮಳೆ ಬೀಳುವ ಸಾಧ್ಯತೆ ಇದ್ದು, ಆಂಧ್ರಪ್ರದೇಶದಲ್ಲೂ ಭಾರಿಯಿಂದ ಅತಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಇದರ ಜೊತೆಗೆ, ಕೇರಳ, ಮಾಹೆ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿಯೂ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನವೆಂಬರ್ 29 ಮತ್ತು 30 ರಂದು ದಕ್ಷಿಣ ಒಳ ಕರ್ನಾಟಕದಲ್ಲಿ ಮಳೆ ತೀವ್ರಗೊಳ್ಳುವ ಸಾಧ್ಯತೆ ಇದೆ.

ಇದರೊಂದಿಗೆ, ರಾಷ್ಟ್ರ ರಾಜಧಾನಿ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ವಾಯು ಗುಣಮಟ್ಟವು (Air Quality Index) “ತುಂಬಾ ಕಳಪೆ” (“Very Poor”) ವಿಭಾಗದಲ್ಲಿ ಮುಂದುವರಿದಿದೆ. ಇಂದು ಬೆಳಿಗ್ಗೆ 7 ಗಂಟೆಯ ಹೊತ್ತಿಗೆ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ (AQI) 341 ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಮಾಡಿದೆ.

ರಾಜ್ಯ ರಾಷ್ಟ್ರೀಯ ಹವಾಮಾನ ವರದಿ