ಕೆಂಪುಕೋಟೆ ಸ್ಫೋಟ ಪ್ರಕರಣ: ವಿಶೇಷ ಸರ್ಕಾರಿ ಅಭಿಯೋಜಕರಾಗಿ ಮಾಧವ್ ಖುರಾನಾ ನೇಮಕ

ಕೆಂಪುಕೋಟೆ ಸ್ಫೋಟ ಪ್ರಕರಣ: ವಿಶೇಷ ಸರ್ಕಾರಿ ಅಭಿಯೋಜಕರಾಗಿ ಮಾಧವ್ ಖುರಾನಾ ನೇಮಕ

ನವದೆಹಲಿ(ಡಿ.3): ನವೆಂಬರ್ 10 ರಂದು ಕೆಂಪುಕೋಟೆಯ ಬಳಿ ಸಂಭವಿಸಿದ ಭೀಕರ ಕಾರು ಸ್ಫೋಟ ಪ್ರಕರಣದ ವಿಚಾರಣೆ ಮತ್ತು ಇತರ ಕಾನೂನು ಪ್ರಕ್ರಿಯೆಗಳನ್ನು ನಡೆಸಲು ಹಿರಿಯ ವಕೀಲ ಮಾಧವ್ ಖುರಾನಾ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕ (Special Public Prosecutor) ಆಗಿ ಕೇಂದ್ರ ಗೃಹ ಸಚಿವಾಲಯವು ನೇಮಕ ಮಾಡಿದೆ.

ಈ ದುರಂತದಲ್ಲಿ 15 ಜನರು ಪ್ರಾಣ ಕಳೆದುಕೊಂಡಿದ್ದರು.ಸರ್ಕಾರಿ ಆದೇಶದ ಪ್ರಕಾರ, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಪರವಾಗಿ ಮಾಧವ್ ಖುರಾನಾ ಅವರು ಎನ್‌ಐಎ ವಿಶೇಷ ನ್ಯಾಯಾಲಯ ಮತ್ತು ದೆಹಲಿ ಹೈಕೋರ್ಟ್‌ನ ಮುಂದೆ ವಿಚಾರಣೆ ಮತ್ತು ಇತರ ಕಾನೂನು ವಿಷಯಗಳನ್ನು ನಡೆಸಲು ಅವರನ್ನು ಮೂರು ವರ್ಷಗಳ ಅವಧಿಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಿಸಲಾಗಿದೆ.

ಏಳು ಮಂದಿ ಪ್ರಮುಖ ಆರೋಪಿಗಳ ಬಂಧನ

ಈ ಪ್ರಕರಣದಲ್ಲಿ ಇದುವರೆಗೆ ಏಳು ಪ್ರಮುಖ ಆರೋಪಿಗಳನ್ನು ಎನ್‌ಐಎ ಬಂಧಿಸಿದೆ. ಆರೋಪಿತ ಆತ್ಮಹತ್ಯಾ ಬಾಂಬರ್ ಉಮರ್ ಉನ್ ನಬಿ ಎಂಬಾತನು ಸುಧಾರಿತ ಸ್ಫೋಟಕ ಸಾಧನ (IED) ಬಳಸಿ ಹ್ಯುಂಡೈ ಐ20 ಕಾರಿನೊಳಗೆ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದನು ಎಂದು ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದ ಸೂಕ್ಷ್ಮತೆ ಮತ್ತು ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ತ್ವರಿತ ಮತ್ತು ಪರಿಣಾಮಕಾರಿ ಕಾನೂನು ಕ್ರಮಕ್ಕಾಗಿ ಹಿರಿಯ ವಕೀಲರಾದ ಖುರಾನಾ ಅವರನ್ನು ನೇಮಕ ಮಾಡಲಾಗಿದೆ.

ರಾಷ್ಟ್ರೀಯ