ನವದೆಹಲಿ (ಡಿ.4): ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು 23ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಗುರುವಾರ ಸಂಜೆ ಭಾರತಕ್ಕೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪುಟಿನ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.

ತಮ್ಮ ಆಪ್ತ ಮಿತ್ರ ಅಧ್ಯಕ್ಷ ಪುಟಿನ್ ಅವರನ್ನು ಭಾರತಕ್ಕೆ ಸ್ವಾಗತಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಸಂತಸ ವ್ಯಕ್ತಪಡಿಸಿದ್ದಾರೆ.

“ನನ್ನ ಮಿತ್ರ ಅಧ್ಯಕ್ಷ ಪುಟಿನ್ ಅವರನ್ನು ಭಾರತಕ್ಕೆ ಸ್ವಾಗತಿಸಲು ಸಂತೋಷವಾಗಿದೆ. ಇಂದು ಸಂಜೆ ಮತ್ತು ನಾಳೆ ನಡೆಯಲಿರುವ ನಮ್ಮ ಸಂವಾದಗಳಿಗಾಗಿ ಎದುರು ನೋಡುತ್ತಿದ್ದೇನೆ. ಭಾರತ-ರಷ್ಯಾ ಸ್ನೇಹವು ಕಾಲಾನಂತರದಲ್ಲಿ ಪರೀಕ್ಷಿಸಲ್ಪಟ್ಟಿದೆ ಮತ್ತು ಅದು ನಮ್ಮ ಜನರಿಗೆ ಅಪಾರವಾಗಿ ಪ್ರಯೋಜನ ನೀಡಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.


