ಅಕ್ರಮ ದೂರವಾಣಿ ವಿನಿಮಯ ಕೇಂದ್ರ ಭೇದಿಸಿದ ಬೆಂಗಳೂರು ಪೊಲೀಸರು: 1193 ಸಿಮ್ ಕಾರ್ಡ್‌ಗಳು ವಶ!

ಅಕ್ರಮ ದೂರವಾಣಿ ವಿನಿಮಯ ಕೇಂದ್ರ ಭೇದಿಸಿದ ಬೆಂಗಳೂರು ಪೊಲೀಸರು: 1193 ಸಿಮ್ ಕಾರ್ಡ್‌ಗಳು ವಶ!

ಬೆಂಗಳೂರು: ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತಿಸಿ, ರಾಷ್ಟ್ರೀಯ ಭದ್ರತೆ ಮತ್ತು ಸರ್ಕಾರಕ್ಕೆ ಆರ್ಥಿಕ ನಷ್ಟವನ್ನುಂಟು ಮಾಡುತ್ತಿದ್ದ ಅಕ್ರಮ ದೂರವಾಣಿ ವಿನಿಮಯ ಕೇಂದ್ರವನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಪೊಲೀಸರು 28 ಸಿಮ್ ಬಾಕ್ಸ್‌ಗಳು ಮತ್ತು ವಿವಿಧ ಕಂಪನಿಗಳಿಗೆ ಸೇರಿದ 1,193 ಸಿಮ್ ಕಾರ್ಡ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಕರಣದ ವಿವರ
ವೊಡಾಫೋನ್ ಲಿಮಿಟೆಡ್ ಕಂಪನಿಯು ನವೆಂಬರ್ 28 ರಂದು ದೂರು ನೀಡಿತ್ತು. ಎಲೆಕ್ಟ್ರಾನಿಕ್ ಸಿಟಿ ಫೇಸ್-2 ನಲ್ಲಿರುವ ದೇವರಾಜ್ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಸಿಮ್ ಬಾಕ್ಸ್‌ಗಳನ್ನು ಬಳಸಿ ಅಂತಾರಾಷ್ಟ್ರೀಯ ಕರೆಗಳನ್ನು ಕಾನೂನುಬಾಹಿರವಾಗಿ ಸ್ಥಳೀಯ ಕರೆಗಳಾಗಿ ಪರಿವರ್ತಿಸಲಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು. ಇದು ಸೈಬರ್ ಅಪರಾಧವಾಗಿದ್ದು, ರಾಷ್ಟ್ರೀಯ ಭದ್ರತೆಗೆ ಅಪಾಯ ತಂದೊಡ್ಡುತ್ತಿದೆ ಹಾಗೂ ಸರ್ಕಾರ ಮತ್ತು ಟೆಲಿಕಾಂ ಕಂಪನಿಗೆ ಆರ್ಥಿಕ ನಷ್ಟ ಉಂಟುಮಾಡುತ್ತಿದೆ ಎಂದು ದೂರುದಾರರು ಹೇಳಿದ್ದಾರೆ.
ಈ ದೂರಿನ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ, ಅಕ್ರಮ ವಿನಿಮಯ ಕೇಂದ್ರವನ್ನು ಭೇದಿಸಿದ್ದಾರೆ. ಈ ಸಂಬಂಧ ಇಂದು (ಡಿ. 4) ಪೊಲೀಸರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಅಂತರಾಷ್ಟ್ರೀಯ ಅಪಘಾತ ರಾಜಕೀಯ