ವಿಶಾಖಪಟ್ಟಣ(ಡಿ. 6): ಯುವ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಅವರ ಚೊಚ್ಚಲ ಶತಕ, ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಮಹತ್ವದ ಅರ್ಧಶತಕಗಳ ನೆರವಿನಿಂದ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಒಂಬತ್ತು ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ 2-1 ಅಂತರದಲ್ಲಿ ಸರಣಿಯನ್ನು ಗೆದ್ದುಕೊಂಡಿದೆ.

ವಿಶಾಖಪಟ್ಟಣಂನಲ್ಲಿ ನಡೆದ ಈ ನಿರ್ಣಾಯಕ ಪಂದ್ಯದಲ್ಲಿ 271 ರನ್‌ಗಳ ಗುರಿ ಬೆನ್ನಟ್ಟಿದ ಭಾರತ, 10.1 ಓವರ್‌ಗಳು ಮತ್ತು 9 ವಿಕೆಟ್‌ಗಳು ಬಾಕಿ ಇರುವಂತೆಯೇ ಗುರಿಯನ್ನು ತಲುಪಿ ವಿಜಯೋತ್ಸವ ಆಚರಿಸಿತು.
ಜೈಸ್ವಾಲ್ ತಮ್ಮ ಚೊಚ್ಚಲ ODI ಶತಕವನ್ನು ಬಾರಿಸುವ ಮೂಲಕ ತಂಡದ ಗೆಲುವಿಗೆ ಭದ್ರ ಬುನಾದಿ ಹಾಕಿದರು. ರೋಹಿತ್ ಶರ್ಮಾ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರು ಕೇವಲ 73 ಎಸೆತಗಳಲ್ಲಿ ಏಳು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳ ಸಹಾಯದಿಂದ 75 ರನ್ ಗಳಿಸಿ ಉತ್ತಮ ಆರಂಭ ನೀಡಿದರು. ವಿರಾಟ್ ಕೊಹ್ಲಿ ಅಂತಿಮ ಹಂತದಲ್ಲಿ ಅಬ್ಬರಿಸಿ, ಕೇವಲ 45 ಎಸೆತಗಳಲ್ಲಿ ಆರು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳೊಂದಿಗೆ 65 ರನ್ (ನಾಟ್ ಔಟ್) ಗಳಿಸಿ ಬೌಂಡರಿ ಸಿಡಿಸುವ ಮೂಲಕ ಪಂದ್ಯ ಪೂರ್ಣಗೊಳಿಸಿದರು.

ಭಾರತದ ಬ್ಯಾಟಿಂಗ್ ಪ್ರದರ್ಶನದ ಮುಂದೆ ದಕ್ಷಿಣ ಆಫ್ರಿಕಾ ಬೌಲರ್‌ಗಳು ಮಂಕಾದರು. ಈ ಗೆಲುವಿನೊಂದಿಗೆ, ಭಾರತವು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು ಯಶಸ್ವಿಯಾಗಿ ತಮ್ಮ ತೆಕ್ಕೆಗೆ ಹಾಕಿಕೊಂಡಿತು.

