ಮಿಥುನ್ ರೈ ಮತ್ತು ಐವನ್ ಡಿ ಸೋಜಾ ಇಬ್ಬರಿಗೂ ಕಾಂಗ್ರೆಸ್ ಹೈಕಮಾಂಡ್ ಶೋಕಾಸ್ ನೋಟಿಸ್

ಮಿಥುನ್ ರೈ ಮತ್ತು ಐವನ್ ಡಿ ಸೋಜಾ ಇಬ್ಬರಿಗೂ ಕಾಂಗ್ರೆಸ್ ಹೈಕಮಾಂಡ್ ಶೋಕಾಸ್ ನೋಟಿಸ್

ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ‘ಕುರ್ಚಿ ಕದನ’ ಮುಂದುವರಿದಿದ್ದು, ಇತ್ತೀಚೆಗೆ ಎಐಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮಂಗಳೂರಿಗೆ ಭೇಟಿ ನೀಡಿದ್ದಾಗ ಬಣ ರಾಜಕೀಯ ಸಾರ್ವಜನಿಕವಾಗಿ ಬಯಲಾಗಿತ್ತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರು ಡಿಕೆಶಿ ಪರವಾಗಿ ಘೋಷಣೆ ಕೂಗಿದ್ದರೆ, ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜಾ ಅವರು ಸಿಎಂ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಎಂದು ಪ್ರತ್ಯುತ್ತರ ಘೋಷಣೆ ಕೂಗಿ ಶಿಸ್ತು ಉಲ್ಲಂಘಿಸಿದ್ದರು. ಈ ಗಂಭೀರ ಘಟನೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಕ್ರಮಕ್ಕೆ ಮುಂದಾಗಿದ್ದು, ಪಕ್ಷದಲ್ಲಿ ಬಣ ರಾಜಕೀಯ ಪ್ರದರ್ಶಿಸಿದ ಆರೋಪದ ಮೇಲೆ ಮಿಥುನ್ ರೈ ಮತ್ತು ಐವನ್ ಡಿ ಸೋಜಾ ಇಬ್ಬರಿಗೂ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ರಾಜಕೀಯ ರಾಜ್ಯ